ಕರ್ನಾಟಕ

karnataka

ETV Bharat / state

ಕರ್ನಾಟಕ ರಾಜ್ಯ ಬೀಜ ನಿಗಮವನ್ನ ದೇಶದಲ್ಲೇ ಮಾದರಿಯನ್ನಾಗಿಸಲು ಸಂಕಲ್ಪ: ಬಿ.ಸಿ. ಪಾಟೀಲ್ - b c patil latest news

ಕೃಷಿಕ ಕುಟುಂಬದಿಂದ ಬಂದಿರುವ ಬಿ.ಸಿ.ಪಾಟೀಲ್, ರಾಜ್ಯ ಬೀಜ ನಿಗಮಕ್ಕೆ ಅಧ್ಯಕ್ಷರಾಗಿದ್ದು, ಇಂದು ಬೀಜ ನಿಗಮದ ಅಧ್ಯಕ್ಷರಾಗಿ ಪದಗ್ರಹಣ ಮಾಡಿದರು.

The Karnataka State Seed Corporation is set to be a model for the entire country: b c patil
ಕರ್ನಾಟಕ ರಾಜ್ಯ ಬೀಜ ನಿಗಮವನ್ನು ಇಡೀ ದೇಶದಲ್ಲಿ ಮಾದರಿಯನ್ನಾಗಿಸಲು ಸಂಕಲ್ಪ: ಸಚಿವ ಬಿ.ಸಿ. ಪಾಟೀಲ್

By

Published : Jan 14, 2021, 1:49 PM IST

ಬೆಂಗಳೂರು: ರಾಜ್ಯ ಬೀಜ‌ ನಿಗಮವನ್ನು ಇಡೀ ದೇಶದಲ್ಲಿ ಮಾದರಿ ಬೀಜ ನಿಗಮವನ್ನಾಗಿ ಮಾಡಲು ದೃಢ ಸಂಕಲ್ಪ ಹೊಂದಿದ್ದು, ನಿಗಮವನ್ನು ಬಲಪಡಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳುವುದಾಗಿ ಕೃಷಿ ಸಚಿವರೂ ಆಗಿರುವ ರಾಜ್ಯ ಬೀಜ ನಿಗಮದ ಅಧ್ಯಕ್ಷ ಬಿ‌.ಸಿ. ಪಾಟೀಲ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಮೊದಲ ಬಾರಿಗೆ ಬೀಜ ನಿಗಮಕ್ಕೆ ಚುನಾಯಿತ ಪ್ರತಿನಿಧಿಯೊಬ್ಬರು ಅಧ್ಯಕ್ಷರಾಗಿದ್ದಾರೆ. ಕೃಷಿಕ ಕುಟುಂಬದಿಂದ ಬಂದಿರುವ ಬಿ.ಸಿ.ಪಾಟೀಲ್, ರಾಜ್ಯ ಬೀಜ ನಿಗಮಕ್ಕೆ ಅಧ್ಯಕ್ಷರಾಗಿದ್ದು, ಇಂದು ಬೀಜ ನಿಗಮದ ಅಧ್ಯಕ್ಷರಾಗಿ ಪದಗ್ರಹಣ ಮಾಡಿದರು.

ಬೀಜ ನಿಗಮದ ಅಧ್ಯಕ್ಷರಾಗಿ ಸಚಿವ ಬಿ.ಸಿ. ಪಾಟೀಲ್ ಪದಗ್ರಹಣ

ಅಧಿಕಾರ ಸ್ವೀಕರಿಸಿ ಮೊದಲ ಬಾರಿಗೆ ರಾಜ್ಯ ಬೀಜ ನಿಗಮದ ಇಲ್ಲಿಯವರೆಗಿನ ಸಾಧನೆ, ಮುಂದಿರುವ ಯೋಜನೆಗಳು, ಬೀಜ ಉತ್ಪಾದನೆ, ಕೈಗೊಂಡಿರುವ ಕ್ರಮಗಳು ಸೇರಿದಂತೆ ಸಮಗ್ರವಾಗಿ ಬೀಜ ನಿಗಮದ ಅಧಿಕಾರಿ, ಸಿಬ್ಬಂದಿ ವರ್ಗದ ಜೊತೆ ಬೆಂಗಳೂರಿನಲ್ಲಿ ಸಭೆ ನಡೆಸಿ ಚರ್ಚಿಸಿದರು. ರಾಜ್ಯ ಬೀಜ ನಿಗಮದ ಉತ್ಪಾದನೆ‌ ಎಷ್ಟಿದೆ?, ಯಾವ್ಯಾವ ಬೀಜಗಳು ನಿಗಮದಿಂದ ಉತ್ಪಾದನೆಯಾಗುತ್ತಿವೆ?, ಎಷ್ಟು ಜನ ಬೀಜಗಳನ್ನು ಉತ್ಪಾದಿಸುತ್ತಿದ್ದಾರೆ?, ಪ್ರಮಾಣಿತ ಬೀಜಗಳ ಮಾಹಿತಿ, ರೈತರಿಗೆ ಅವುಗಳನ್ನು ತಲುಪಿಸುವ ಕುರಿತು ಅಧಿಕಾರಿಗಳ ಜೊತೆ ಬಿ.ಸಿ.ಪಾಟೀಲ್ ಚರ್ಚಿಸಿದರು.

ಈ ಸುದ್ದಿಯನ್ನೂ ಓದಿ:ಕೊರೊನಾ ಮುಂಜಾಗ್ರತೆ: ಕೂಡಲಸಂಗಮದಲ್ಲಿ 'ಸಂಕ್ರಾಂತಿ' ಪುಣ್ಯಸ್ನಾನ ನಿಷೇಧ

ಪ್ರಮಾಣಿತ ಬೀಜಗಳನ್ನೇ ಉತ್ಪಾದಿಸಬೇಕು ಹಾಗೂ ರೈತರಿಗೆ ಯಾವುದೇ ತೊಂದರೆಯಾಗದಂತೆ ಅವುಗಳನ್ನು ಪೂರೈಸಬೇಕು. ಕಳಪೆ ಬಿತ್ತನೆ ಬೀಜ ಮಾರಾಟಗಾರರ ಮೇಲೆ ನಿಗಾ ಇಟ್ಟಿರಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಬೀಜ ನಿಗಮ ಅಭಿವೃದ್ಧಿಯಾಗಲು ಹಾಗೂ ರೈತರಿಗೆ ಸಾಧ್ಯವಾದಷ್ಟು ಅನುಕೂಲ ಕಲ್ಪಿಸಲು ರಾಜ್ಯದಲ್ಲಿ ಸಾಕಷ್ಟು ಅವಕಾಶಗಳಿದ್ದು, ಇರುವ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ರಾಜ್ಯ ಬೀಜ ನಿಗಮವನ್ನು ಇಡೀ ದೇಶದಲ್ಲಿಯೇ ಮಾದರಿ ನಿಗಮವನ್ನಾಗಿ ಮಾಡಲು ಎಲ್ಲರೂ ಬದ್ಧರಾಗಿ ದೃಢ ಸಂಕಲ್ಪ ಹೊಂದಬೇಕೆಂದು ಬಿ.ಸಿ.ಪಾಟೀಲ್ ಕರೆ ನೀಡಿದರು.

ABOUT THE AUTHOR

...view details