ಕನ್ನಡ ರಾಜ್ಯೋತ್ಸವ ದಿನದಂದು ಧ್ವಜಾರೋಹಣ ಮಾಡುವ ಸಚಿವರ ಪಟ್ಟಿ ಪ್ರಕಟ - kannada rajyothsava
ಕನ್ನಡ ರಾಜ್ಯೋತ್ಸವ ದಿನಾಚರಣೆಯ ಪ್ರಯುಕ್ತ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡುವ ಸಚಿವರ ಪಟ್ಟಿ ಪ್ರಕಟಿಸಲಾಗಿದೆ.
ಕನ್ನಡ ರಾಜ್ಯೋತ್ಸವ ದಿನದಂದು ಧ್ವಜಾರೋಹಣ ಮಾಡುವ ಸಚಿವರ ಪಟ್ಟಿ ಪ್ರಕಟ
ಬೆಂಗಳೂರು:ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ದಿನಾಚರಣೆಯ ಪ್ರಯುಕ್ತ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ(ಬೆಂಗಳೂರು ನಗರ ಜಿಲ್ಲೆಯನ್ನು ಹೊರತುಪಡಿಸಿ) ಈ ಕೆಳಗೆ ಸೂಚಿಸಿದಂತೆ ಉಪ ಮುಖ್ಯಮಂತ್ರಿಗಳು, ಸಚಿವರು ಹಾಗೂ ಜಿಲ್ಲಾಧಿಕಾರಿಗಳನ್ನು ಧ್ವಜಾರೋಹಣ ಮಾಡಲು ನೇಮಿಸಲಾಗಿದೆ.
- ಡಿಸಿಎಂ ಗೋವಿಂದ ಎಂ. ಕಾರಜೋಳ- ಬಾಗಲಕೋಟೆ.
- ಡಿಸಿಎಂ ಡಾ. ಅಶ್ವತ್ಥ ನಾರಾಯಣ- ರಾಮನಗರ.
- ಡಿಸಿಎಂ ಲಕ್ಷ್ಮಣ ಸವದಿ- ರಾಯಚೂರು.
- ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ- ಶಿವಮೊಗ್ಗ.
- ಕಂದಾಯ ಸಚಿವ ಆರ್.ಅಶೋಕ್- ಬೆಂಗಳೂರು ಗ್ರಾಮಾಂತರ.
- ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ಯಮಗಳ ಸಚಿವ ಜಗದೀಶ್ ಶೆಟ್ಟರ್- ಧಾರವಾಡ.
- ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು- ಚಿತ್ರದುರ್ಗ.
- ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್- ಚಾಮರಾಜನಗರ.
- ವಸತಿ ಸಚಿವ ವಿ.ಸೋಮಣ್ಣ- ಕೊಡಗು.
- ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ- ಚಿಕ್ಕಮಗಳೂರು.
- ಗೃಹ ಸಚಿವ ಬಸವರಾಜ ಬೊಮ್ಮಾಯಿ- ಹಾವೇರಿ.
- ಮುಜರಾಯಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಚಿವ ಕೋಟಾ ಶ್ರೀನಿವಾಸ ಪೂಜಾರಿ- ದಕ್ಷಿಣ ಕನ್ನಡ.
- ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ- ತುಮಕೂರು.
- ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿ.ಸಿ.ಪಾಟೀಲ್- ಗದಗ.
- ಅಬಕಾರಿ ಸಚಿವ ಹೆಚ್.ನಾಗೇಶ್- ಕೋಲಾರ.
- ಪಶು ಸಂಗೋಪನೆ ಸಚಿವ ಪ್ರಭು ಚೌವ್ಹಾಣ್- ಬೀದರ್.
- ಮಹಿಳಾ ಮತ್ತು ಮಕ್ಕಳಾಭಿವೃದ್ಧಿ ಸಚಿವೆ ಜೊಲ್ಲೆ ಶಶಿಕಲಾ ಅಣ್ಣಾ ಸಾಹೇಬ್- ವಿಜಯಪುರ.
- ಅರಣ್ಯ ಸಚಿವ ಆನಂದ್ ಸಿಂಗ್- ಬಳ್ಳಾರಿ.
- ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ (ಭೈರತಿ)- ದಾವಣಗೆರೆ.
- ಸಹಕಾರ ಸಚಿವ ಎಸ್.ಟಿ.ಸೋಮಶೇಖರ್- ಮೈಸೂರು.
- ಕೃಷಿ ಸಚಿವ ಬಿ.ಸಿ.ಪಾಟೀಲ್- ಕೊಪ್ಪಳ.
- ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ.ಸುಧಾಕರ್- ಚಿಕ್ಕಬಳ್ಳಾಪುರ.
- ಪೌರಾಡಳಿತ, ತೋಟಗಾರಿಕೆ ಹಾಗೂ ರೇಷ್ಮೆ ಸಚಿವ ಕೆ.ಸಿ.ನಾರಾಯಣಗೌಡ- ಮಂಡ್ಯ.
- ಕಾರ್ಮಿಕ ಮತ್ತು ಸಕ್ಕರೆ ಸಚಿವ ಶಿವರಾಂ ಹೆಬ್ಬಾರ್ - ಉತ್ತರ ಕನ್ನಡ ಜಿಲ್ಲೆ.
- ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ- ಬೆಳಗಾವಿ.
- ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಗೋಪಾಲಯ್ಯ - ಹಾಸನ.
- ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಶ್ರೀಮಂತ ಬಾಳಾಸಾಹೇಬ ಪಾಟೀಲ್- ಕಲಬುರಗಿ.
- ಜಿಲ್ಲಾಧಿಕಾರಿಗಳು- ಉಡುಪಿ.
- ಜಿಲ್ಲಾಧಿಕಾರಿಗಳು- ಯಾದಗಿರಿ.