ಬೆಂಗಳೂರು : ರಾಜ್ಯ ಸರ್ಕಾರ ಪತ್ರ ಬರೆದು ಮಾಡಿರುವ ಮನವಿಗೆ ಸ್ಪಂದಿಸಿ ನೀರು ಹರಿಸಲು ಮುಂದಾಗಿರುವ ಮಹಾರಾಷ್ಟ್ರ ಸರ್ಕಾರದ ನಡೆಗೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅಭಿನಂದನೆ ಸಲ್ಲಿಸಿದ್ದಾರೆ.
ರಾಜ್ಯ ಸರ್ಕಾರದ ಮನವಿಗೆ ಸ್ಪಂದನೆ: ಕೃಷ್ಣಾ-ಭೀಮಾ ನದಿಗೆ ನೀರು ಬಿಡಲು ಮಹಾ ಸಿಎಂ ನಿರ್ಧಾರ - undefined
ರಾಜ್ಯ ಸರ್ಕಾರದ ಮನವಿಗೆ ಸ್ಪಂದಿಸಿರುವ ಮಹಾರಾಷ್ಟ್ರ ಸರ್ಕಾರ, ಕೃಷ್ಣಾ ನದಿಗೆ ನೀರು ಹರಿಸಲು ಮುಂದಾಗಿದೆ.
![ರಾಜ್ಯ ಸರ್ಕಾರದ ಮನವಿಗೆ ಸ್ಪಂದನೆ: ಕೃಷ್ಣಾ-ಭೀಮಾ ನದಿಗೆ ನೀರು ಬಿಡಲು ಮಹಾ ಸಿಎಂ ನಿರ್ಧಾರ](https://etvbharatimages.akamaized.net/etvbharat/prod-images/768-512-3192616-thumbnail-3x2-bng.jpg)
ಕೃಷ್ಣಾ-ಭೀಮಾ ನದಿಗೆ ನೀರು ಹರಿಸಲು ಮಹಾ ಸಿಎಂ ನಿರ್ಧಾರ
ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ತೀವ್ರ ಬರಗಾಲದಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಮಹಾರಾಷ್ಟ್ರ ಸರ್ಕಾರಕ್ಕೆ ಪತ್ರ ಬರೆದು ಕೃಷ್ಣಾ ನದಿಗೆ ನೀರು ಹರಿಸಲು ಮನವಿ ಮಾಡಿತ್ತು. ಇದಕ್ಕೆ ಸ್ಪಂದಿಸಿರುವ ಮಹಾರಾಷ್ಟ್ರ ಸರ್ಕಾರ ನೀರು ಹರಿಸಲು ಸಮ್ಮತಿಸಿದೆ. ಹಾಗಾಗಿ ಸಿಎಂ ಕುಮಾರಸ್ವಾಮಿ ಅವರು ಮಹಾರಾಷ್ಟ್ರ ಸಿಎಂಗೆ ಅಭಿನಂದನೆ ಸಲ್ಲಿಸಿದ್ದಾರೆ.