ಕರ್ನಾಟಕ

karnataka

ETV Bharat / state

ರಾಜ್ಯದಲ್ಲಿ ಇಂದಿನಿಂದ 1-10ನೇ ತರಗತಿ ಮಕ್ಕಳಿಗೆ ಬಿಸಿಯೂಟ: ಈ ಕ್ರಮಗಳ ಪಾಲನೆ ಕಡ್ಡಾಯ‌

2020-21ನೇ ಸಾಲಿನಲ್ಲಿ ಶಾಲೆಗಳನ್ನು ತೆರೆಯದೆ 2020ರ ಮಾರ್ಚ್ 14ರಿಂದ ಇದುವರೆಗೂ ಆಹಾರ ಭದ್ರತಾ ಕಾಯ್ದೆ 2013 ರಡಿ ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 1ರಿಂದ 10ನೇ ತರಗತಿ ಅರ್ಹ ವಿದ್ಯಾರ್ಥಿ ಫಲಾನುಭವಿಗಳಿಗೆ ಬಿಸಿಯೂಟದ ಬದಲಿಗೆ ಆಹಾರ ಧಾನ್ಯಗಳನ್ನು ವಿತರಿಸಲಾಗಿತ್ತು.

ಬಿಸಿಯೂಟ
ಬಿಸಿಯೂಟ

By

Published : Nov 2, 2021, 3:55 PM IST

ಬೆಂಗಳೂರು: ರಾಜ್ಯದಲ್ಲಿ ಸಾಂಕ್ರಾಮಿಕ ಕೋವಿಡ್ ಸೋಂಕು ಇಳಿಕೆಯಾದ ಬೆನ್ನಲ್ಲೇ ಮತ್ತೆ ಎಲ್ಲ ಶೈಕ್ಷಣಿಕ ಚಟುವಟಿಕೆಗಳು ಪುನರ್ ಆರಂಭಗೊಳ್ಳುತ್ತಿದೆ‌.‌ ಇದೀಗ 1 ರಿಂದ 10ನೇ ತರಗತಿಗಳು ಭೌತಿಕವಾಗಿ ಆರಂಭಗೊಂಡಿವೆ.

ಕೊರೊನಾ ಸೋಂಕು ಮತ್ತಷ್ಟು ಇಳಿಕೆಯಾದ ಕಾರಣ ಇಂದಿನಿಂದ (ನವೆಂಬರ್ 2) 1 ರಿಂದ 10 ನೇ ತರಗತಿ ಎಲ್ಲ ಮಕ್ಕಳಿಗೂ ಬಿಸಿಯೂಟ ನೀಡಲಾಗುತ್ತಿದೆ. ಇಷ್ಟು ದಿನ ಬಿಸಿಯೂಟದ ಬದಲಿಗೆ ಆಹಾರ ಧಾನ್ಯಗಳನ್ನು ನೀಡಲಾಗುತ್ತಿತ್ತು.

2020-21ನೇ ಸಾಲಿನಲ್ಲಿ ಶಾಲೆಗಳನ್ನು ತೆರೆಯದೆ 2020ರ ಮಾರ್ಚ್ 14 ರಿಂದ ಇದುವರೆಗೂ ಆಹಾರ ಭದ್ರತಾ ಕಾಯ್ದೆ 2013 ರಡಿ ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 1ರಿಂದ 10ನೇ ತರಗತಿ ಅರ್ಹ ವಿದ್ಯಾರ್ಥಿ ಫಲಾನುಭವಿಗಳಿಗೆ ಬಿಸಿಯೂಟದ ಬದಲಿಗೆ ಆಹಾರ ಧಾನ್ಯಗಳನ್ನು ವಿತರಿಸಲಾಗಿತ್ತು.

ಇದೀಗ, ಇಂದಿನಿಂದ ಪೂರ್ಣ ಪ್ರಮಾಣದಲ್ಲಿ ತರಗತಿಗಳು ಆರಂಭವಾಗಿವೆ. ಇದರೊಂದಿಗೆ ಇನ್ಮುಂದೆ ಬಿಸಿಯೂಟ ಯೋಜನೆಯೂ ಶುರುವಾಗಲಿದೆ. 2021-22ನೇ ಸಾಲಿನಲ್ಲಿ PM-POSHAN Shakthi Nirman ಮಧ್ಯಾಹ್ನ ಉಪಹಾರ ಯೋಜನೆಯಡಿ ಶಾಲೆಗಳಲ್ಲಿರುವ ಅಡುಗೆ ಕೇಂದ್ರಗಳಲ್ಲಿ ಬಿಸಿಯೂಟ ಸಿದ್ಧಪಡಿಸುವ ಹಾಗೂ ಸ್ವಯಂಸೇವಾ ಸಂಸ್ಥೆಗಳ ಮೂಲಕ ಬಿಸಿಯೂಟ ಸಿದ್ಧಪಡಿಸಿ ವಿದ್ಯಾರ್ಥಿಗಳಿಗೆ ವಿತರಿಸಲು ಅಗತ್ಯ ಪೂರ್ವ ತಯಾರಿಗಾಗಿ ಕೋವಿಡ್ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.

ಎಸ್‌ಒಪಿ (ಪ್ರಮಾಣಿತ ಕಾರ್ಯ ವಿಧಾನ) ಅಂಶಗಳು:

  • ಶಾಲೆಯ ಅಡುಗೆ ಕೋಣೆಯನ್ನು ಸ್ವಚ್ಚಗೊಳಿಸಬೇಕು. ಆಹಾರ ದಾಸ್ತಾನು ಕೊಠಡಿಯನ್ನು ಡೀಪ್ ಕ್ಲಿನಿಂಗ್ ಮಾಡಬೇಕು.
  • ಅಡುಗೆ ಕೋಣೆಯ ಅಡುಗೆ ಪಾತ್ರೆ ಪರಿಕರಗಳ ಸ್ವಚ್ಛತೆಗಾಗಿ ಸೋಪ್ ಆಯಿಲ್, ಫ್ಲೋರಿಂಗ್ ಸ್ಯಾನಿಟೈಸರ್, ಬ್ಲೀಚಿಂಗ್ ಪೌಡರ್ ಇತ್ಯಾದಿ ಸಾಮಗ್ರಿಗಳನ್ನು ಅಗತ್ಯ ಪ್ರಮಾಣದಲ್ಲಿ ಖರೀದಿಸಬೇಕು.
  • ಶಾಲಾ ವಿದ್ಯಾರ್ಥಿಗಳು ಕೈತೊಳೆಯಲು ನೀರಿನ ವ್ಯವಸ್ಥೆಯೊಂದಿಗೆ ಹ್ಯಾಂಡ್ ವಾಷಿಂಗ್ ಯುನಿಟ್‌ಗಳನ್ನು ರಿಪೇರಿ ಮಾಡಿಸಿ ಸ್ವಚ್ಛವಾಗಿಟ್ಟು ಪ್ರತಿ ನಿತ್ಯ ಕೈ ತೊಳೆಯಲು ಉಪಯೋಗಿಸಬೇಕು.
  • ಶಾಲೆಯಲ್ಲಿರುವ ಶೌಚಾಲಯಗಳನ್ನು ಸ್ವಚ್ಚವಾಗಿಟ್ಟುಕೊಳ್ಳಲು ಅಗತ್ಯ ಕ್ರಮವಹಿಸಿಬೇಕು.
  • ಅಡುಗೆ ಸಿಬ್ಬಂದಿ ವೈಯುಕ್ತಿಕ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವುದು ಕಡ್ಡಾಯ.
  • ಅಡುಗೆ ಸಿಬ್ಬಂದಿಗಳು ಕಡ್ಡಾಯವಾಗಿ ಕೋವಿಡ್-19ರ ವೈರಸ್ ಸಾಂಕ್ರಾಮಿಕ ತಡೆಗಟ್ಟಲು ಮುನ್ನೆಚ್ಚರಿಕಾ ಕ್ರಮವಾಗಿ 'ಎರಡು ಡೋಸ್' ಲಸಿಕೆಯನ್ನು ತಪ್ಪದೇ ಹಾಕಿಸಿಕೊಂಡಿರಬೇಕು.
  • ಕಾಲಕಾಲಕ್ಕೆ ಕೋವಿಡ್-19ರ ಪರೀಕ್ಷೆಯನ್ನು ಮಾಡಿಸಿಕೊಂಡಿರುವುದನ್ನು ಮುಖ್ಯ ಶಿಕ್ಷಕರು ಖಾತ್ರಿಪಡಿಸಿಕೊಳ್ಳಬೇಕು.

For All Latest Updates

TAGGED:

id day meal

ABOUT THE AUTHOR

...view details