ಕರ್ನಾಟಕ

karnataka

ಸಿರಿಧಾನ್ಯಕ್ಕೆ ಜಾಗತಿಕ ಮನ್ನಣೆ ಸಿಕ್ಕಿದ್ದು ಕಾಂಗ್ರೆಸ್ ಪಕ್ಷದಿಂದ: ಎಸ್.ಆರ್.ಪಾಟೀಲ್

By

Published : Mar 13, 2021, 4:28 PM IST

ಕಡು ಬಡವನ ಆಹಾರ ಸಿರಿಧಾನ್ಯಕ್ಕೆ ಈಗ ಜಾಗತಿಕ ಮನ್ನಣೆ ಸಿಕ್ಕಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಒಕ್ಕೂಟ 2023ಅನ್ನು ‘ಅಂತಾರಾಷ್ಟ್ರೀಯ ಸಿರಿಧಾನ್ಯಗಳ ವರ್ಷ’ವಾಗಿ ಆಚರಿಸುವುದಾಗಿ ಘೋಷಿಸಿದೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್.ಪಾಟೀಲ್ ಹೇಳಿದ್ದಾರೆ.

ವಿಧಾನಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್.ಪಾಟೀಲ್
ವಿಧಾನಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್.ಪಾಟೀಲ್

ಬೆಂಗಳೂರು:ಸಿರಿಧಾನ್ಯಕ್ಕೆ ಜಾಗತಿಕ ಮನ್ನಣೆ ಸಿಕ್ಕಿದ್ದು ಕಾಂಗ್ರೆಸ್ ಪಕ್ಷದಿಂದ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್.ಪಾಟೀಲ್ ಹೇಳಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕಡು ಬಡವನ ಆಹಾರ ಸಿರಿಧಾನ್ಯಕ್ಕೆ ಈಗ ಜಾಗತಿಕ ಮನ್ನಣೆ ಸಿಕ್ಕಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಒಕ್ಕೂಟ 2023ಅನ್ನು ‘ಅಂತಾರಾಷ್ಟ್ರೀಯ ಸಿರಿಧಾನ್ಯಗಳ ವರ್ಷ’ವಾಗಿ ಆಚರಿಸುವುದಾಗಿ ಘೋಷಿಸಿದೆ. ಸಿರಿಧಾನ್ಯಕ್ಕೆ ಜಾಗತಿಕ ಮನ್ನಣೆ ಸಿಗಲು ಕಾಂಗ್ರೆಸ್ ಪಕ್ಷವೇ ಕಾರಣ ಎಂದಿದ್ದಾರೆ.

2017-18ರಲ್ಲಿ ಕೃಷಿ ಸಚಿವರಾಗಿದ್ದ ಕೃಷ್ಣಬೈರೇಗೌಡ ಅವರು ಕೇಂದ್ರ ಸರ್ಕಾರಕ್ಕೆ ಸಿರಿಧಾನ್ಯಕ್ಕೆ ಮನ್ನಣೆ ನೀಡುವಂತೆ ಪ್ರಸ್ತಾವನೆ ಕಳುಹಿಸಿದ್ದರು. ಅಲ್ಲದೇ ಆಹಾರ ಮತ್ತು ಕೃಷಿ ಒಕ್ಕೂಟದ ಆಹ್ವಾನದ ಮೇರೆಗೆ ರೋಮ್‌ನಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ ಸಿರಿಧಾನ್ಯಗಳ ಮಹತ್ವ ವಿವರಿಸಿ, ಸಿರಿಧಾನ್ಯಗಳ ವರ್ಷಾಚರಣೆ ಘೋಷಣೆಗೆ ಮನವಿ ಮಾಡಿದ್ದರು ಎಂದು ತಿಳಿಸಿದ್ದಾರೆ.

ನಮ್ಮ ಪಕ್ಷದ ಮನವಿ ಪುರಸ್ಕರಿಸಿ ವಿಶ್ವಸಂಸ್ಥೆಯ ಎಫ್‌ಎಒಗೆ ಕೇಂದ್ರ ಸರ್ಕಾರ ಪ್ರಸ್ತಾವನೆ ಸಲ್ಲಿಸಿತ್ತು. ಇದೀಗ ಸಿರಿಧಾನ್ಯಕ್ಕೆ ಜಾಗತಿಕ ಮನ್ನಣೆ ಸಿಕ್ಕಿದೆ. ಇದು ಕರ್ನಾಟಕದ ಸಿರಿಧಾನ್ಯ ಆಂದೋಲನಕ್ಕೆ ಸಂದ ಗೌರವ. ಆದರೆ ಕರ್ನಾಟಕ ಸರ್ಕಾರದಿಂದ ಈವರೆಗೂ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ಕೃಷಿ ಇಲಾಖೆ, ಸಾವಯವ ಕೃಷಿ ಮಿಷನ್‌ ಕೂಡ ಮೌನವಾಗಿವೆ ಎಂದು ವಿವರಿಸಿದ್ದಾರೆ.

ABOUT THE AUTHOR

...view details