ಕರ್ನಾಟಕ

karnataka

ETV Bharat / state

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಮುಂದಿನ ಎರಡು ದಿನ ಮತ್ತೆ ಮಳೆ

ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯ ತಜ್ಞ ಸದಾನಂದ ಅಡಿಗ ಹೇಳಿದ್ದಾರೆ.

ಮುಂದಿನ ಎರಡು ದಿನ ಮಳೆ
ಮುಂದಿನ ಎರಡು ದಿನ ಮಳೆ

By

Published : Dec 13, 2021, 4:38 PM IST

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆ ಮುಂದಿನ 2 ದಿನ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯ ತಜ್ಞ ಸದಾನಂದ ಅಡಿಗ ಮಾಹಿತಿಯನ್ನು ನೀಡಿದ್ದಾರೆ.

ಹವಾಮಾನ ಇಲಾಖೆಯ ತಜ್ಞ ಸದಾನಂದ ಅಡಿಗ ಮಾಹಿತಿ

ನಾಳೆ ನಾಡಿದ್ದು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದಿದ್ದಾರೆ.

ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಸದಾನಂದ ಅಡಿಗ ಹೇಳಿದ್ದಾರೆ.

ಇದನ್ನೂ ಓದಿ : ವಿಧಾನಪರಿಷತ್ ಚುನಾವಣೆ.. ಬಿಜೆಪಿ 15 ಸ್ಥಾನ ಗೆಲ್ಲಲಿದೆ: ಮಾಜಿ ಸಿಎಂ ಯಡಿಯೂರಪ್ಪ ವಿಶ್ವಾಸ

ABOUT THE AUTHOR

...view details