ಕರ್ನಾಟಕ

karnataka

ETV Bharat / state

ಸಿನಿಮೀಯ ಶೈಲಿಯಲ್ಲಿ ಮಾರಕಾಸ್ತ್ರಗಳಿಂದ ಹಲ್ಲೆ: ಸಿಸಿಟಿವಿ ದೃಶ್ಯಾವಳಿ ವೈರಲ್ - Bengalore crime news

ಕುಡಿದ ಮತ್ತಿನಲ್ಲಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಸಿಸಿಟಿವಿ ದೃಶ್ಯಾವಳಿ ವೈರಲ್​ ಆಗಿದ್ದು, ಸಿಸಿಟಿವಿ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಡಿ.ಜಿ.ಹಳ್ಳಿ ಪೊಲೀಸರು ಆರೋಪಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.

CCTV footage viral
ಸಿಸಿಟಿವಿ ದೃಶ್ಯಾವಳಿ

By

Published : Sep 17, 2020, 3:58 PM IST

ಬೆಂಗಳೂರು:ಕುಡಿದ ನಶೆಯಲ್ಲಿ ಸಿನಿಮೀಯ ಶೈಲಿಯಲ್ಲಿ ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದ ಸಿಸಿಟಿವಿ ದೃಶ್ಯಾವಳಿ ವೈರಲ್ ಆಗಿದೆ‌.

ದೃಶ್ಯದಲ್ಲಿ ದಿಲೀಪ್ ಹಾಗೂ ಕಪಿಲ್ ಎಂಬುವರನ್ನು ಗುರಿಯಾಗಿಸಿಕೊಂಡು ಮಾರಕಾಸ್ತ್ರಗಳಿಂದ ಆರೋಪಿ ಪ್ರೇಮ್‌‌‌ ಕುಮಾರ್ ಗ್ಯಾಂಗ್ ಹಲ್ಲೆ ನಡೆಸಿತ್ತು.‌ ಸಿಸಿಟಿವಿ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಡಿ.ಜಿ.ಹಳ್ಳಿ ಪೊಲೀಸರು ಆರೋಪಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.

ಸಿಸಿಟಿವಿ ದೃಶ್ಯಾವಳಿ ವೈರಲ್

ಈ ಸಂಬಂಧ ಪೂರ್ವ ವಿಭಾಗದ ಹೆಚ್ಚುವರಿ ಆಯುಕ್ತ ಎಸ್.ಮುರುಗನ್ ಪ್ರತಿಕ್ರಿಯಿಸಿದ್ದು ಸೆ.8ರಂದು ಡಿ.ಜೆ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಕ್ಷುಲ್ಲಕ ವಿಚಾರಕ್ಕೆ ಗಲಾಟೆಯಾಗಿತ್ತು. ಗಲಾಟೆಯಲ್ಲಿ ದೀಪಕ್ ಮತ್ತು‌ ಕಪಿಲ್ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದವು. ಇಂದು ಬೆಳಿಗ್ಗೆ ಡಿ.ಜೆ ಹಳ್ಳಿ ಪೊಲೀಸರು ಆರೋಪಿ ಪ್ರೇಮ್ ಕುಮಾರ್ ಬಂಧನಕ್ಕೆ ಮುಂದಾದಾಗ ಕಾನ್ ಸ್ಟೇಬಲ್ ರಂಗನಾಥ್ ಮೇಲೆ ಆರೋಪಿ ಹಲ್ಲೆ ಮಾಡಿದ್ದಾನೆ. ಅರೋಪಿ ಶರಣಾಗದೇ ಹಲ್ಲೆಗೆ ಮುಂದಾದಾಗ ಆತನ‌ ಎಡಗಾಲಿಗೆ ಗುಂಡು ಹಾರಿಸಲಾಗಿದೆ ಎಂದು ತಿಳಿಸಿದರು.

ನಂತರ ಆರೋಪಿಯನ್ನು ವಶಕ್ಕೆ ಪಡೆದು ಆತನನ್ನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ಮುಂದುವರೆಸಲಾಗಿದೆ ಎಂದು ಮಾಹಿತಿ ನೀಡಿದರು.

ABOUT THE AUTHOR

...view details