ಬೆಂಗಳೂರು:ಪ್ರವಾಹ ಪರಿಹಾರ ಕಾರ್ಯದಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರುತ್ತಿದೆ ಎಂದು ಆರೋಪಿಸಿ ನಾಳೆಯ ಅಧಿವೇಷನದಲ್ಲಿ ಸರ್ಕಾರದ ವಿರುದ್ಧ ಜೆಡಿಎಸ್ ಪಕ್ಷ ಪ್ರತಿಭಟನೆ ನಡೆಸಲು ಸಜ್ಜಾಗಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ತಿಳಿಸಿದ್ದಾರೆ.
ನೆರೆ ಪರಿಹಾರ: ನಾಳೆ ಪ್ರತಿಭಟನೆಗೆ ಜೆಡಿಎಸ್ ಸಜ್ಜು, ಇಂದು ದೊಡ್ಡ ಗೌಡರ ಜೊತೆ ಪೂರ್ವಭಾವಿ ಸಭೆ - ಮೌರ್ಯ ಸರ್ಕಲ್‌ನಿಂದ ಫ್ರೀಡಂ ಪಾರ್ಕ್‌ವರೆಗೂ ಪಾದಯಾತ್ರೆ
ಪ್ರವಾಹ ಪರಿಹಾರ ಕಾರ್ಯದಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರುತ್ತಿದೆ ಎಂದು ಆರೋಪಿಸಿ ನಾಳೆ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪಕ್ಷ ಪ್ರತಿಭಟನೆ ನಡೆಸಲು ಸಜ್ಜಾಗಿದೆ.
ಇಂದು ಪ್ರತಿಭಟನಾ ಪೂರ್ವಭಾವಿ ಸಿದ್ಧತೆ ಕುರಿತು ಪಕ್ಷದ ಕಚೇರಿ ಜೆಪಿ ಭವನದಲ್ಲಿ ಸಭೆ ನಡೆಸಿದ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ನಾಳೆ ನಡೆಯಲಿರುವ ಪ್ರತಿಭಟನೆ ಯಾವ ರೀತಿ ಇರಬೇಕು ಎಂಬುದರ ಬಗ್ಗೆ ಚರ್ಚೆ ಹಾಗೂ ಸದನದ ಒಳಗೆ ಹೋರಾಟ ಮಾಡುವ ಕುರಿತು ಚರ್ಚೆ ನಡೆಸಿದರು. ಅಲ್ಲದೇ ನಾಳೆ ಮೌರ್ಯ ಸರ್ಕಲ್‌ನಿಂದ ಫ್ರೀಡಂ ಪಾರ್ಕ್‌ವರೆಗೂ ಪಾದಯಾತ್ರೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ. ಸಭೆಯಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ ಸೇರಿದಂತೆ ಪಕ್ಷದ ಶಾಸಕರು, ಮುಖಂಡರು ಭಾಗವಹಿಸಿದ್ದರು. ನಾಳೆಯ ಪ್ರತಿಭಟನೆ ಸರ್ಕಾರದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ಕಾದು ನೋಡಬೇಕಾಗಿದೆ.