ಕರ್ನಾಟಕ

karnataka

ಪಾದರಾಯನಪುರ ಗಲಾಟೆ: ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಸಿದ್ದರಾಮಯ್ಯ ಆಗ್ರಹ

By

Published : Apr 20, 2020, 11:10 AM IST

ಪಾದರಾಯನಪುರದಲ್ಲಿ ನಡೆದಿರುವ ಗಲಭೆಯಲ್ಲಿ ತೊಡಗಿರುವವರನ್ನು ಗುರುತಿಸಿ ಕಠಿಣ ಶಿಕ್ಷೆಗೊಳಪಡಿಸಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

The Padarayanapura uproar case
ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಿನ್ನೆ ತಡರಾತ್ರಿ ಪಾದರಾಯನಪುರದಲ್ಲಿ ನಡೆದ ಘಟನೆಯನ್ನು ಮಾಜಿ ಸಿಎಂ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಪಾದರಾಯನಪುರದಲ್ಲಿ ನಡೆದಿರುವ ಗಲಭೆ ಅತ್ಯಂತ ದುರದೃಷ್ಟಕರ. ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ‌ ತಡೆಯಬೇಕಾದರೆ, ಇಂತಹ ದುಷ್ಕೃತ್ಯದಲ್ಲಿ ತೊಡಗಿರುವವರನ್ನು ಗುರುತಿಸಿ ಕಠಿಣ ಶಿಕ್ಷೆಗೊಳಪಡಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಒತ್ತಾಯಿಸುತ್ತೇನೆ ಎಂದಿದ್ದಾರೆ.

ಕೊರೊನಾ ಸೋಂಕಿನಿಂದ ನಮ್ಮನ್ನು ರಕ್ಷಿಸಲು ವೈದ್ಯಕೀಯ ಮತ್ತು ಪೊಲೀಸ್ ಸಿಬ್ಬಂದಿ ಆರೋಗ್ಯವನ್ನು ಪಣಕ್ಕಿಟ್ಟು ಶ್ರಮಿಸುತ್ತಿದ್ದಾರೆ. ಅವರಿಗೆ ಸಹಕರಿಸುವುದು ನಮ್ಮ ಕರ್ತವ್ಯವಾಗಿದ್ದು, ಗಾಳಿ ಸುದ್ದಿಯಿಂದ ಪ್ರಚೋದನೆಗೊಳಗಾಗದೆ ಜನ‌ ಸಂಯಮದಿಂದ ವರ್ತಿಸಬೇಕೆಂದು ರಾಜ್ಯದ ಜನರಲ್ಲಿ ಮನವಿ ಮಾಡಿದ್ದಾರೆ.

ಕಳೆದ ರಾತ್ರಿ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾದರಾಯನಪುರ ವಾರ್ಡ್​​​ನಲ್ಲಿ ಕಿಡಿಗೇಡಿಗಳು ಪೊಲೀಸರು, ಆರೋಗ್ಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದರು. ಕೊರೊನಾ ಆತಂಕ ಎದುರಿಸುತ್ತಿರುವ ಈ ಪ್ರದೇಶದಲ್ಲಿ ಕೆಲವರನ್ನು ಕ್ವಾರಂಟೈನ್​​​ಗೆ ಕರೆದೊಯ್ಯಲು ತೆರಳಿದ್ದ ಸಂದರ್ಭ ಸ್ಥಳೀಯ ನಾಗರಿಕರು ಗಲಾಟೆ ನಡೆಸಿ, ದಾಳಿ ಮಾಡಿ ಗದ್ದಲ ಎಬ್ಬಿಸಿದರು. ಈಗಾಗಲೇ ಐವತ್ತಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದ್ದು, ಗೃಹ ಸಚಿವ ಬಸವರಾಜ ಬೊಮ್ಮಾಯಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಜೊತೆ ಸ್ಥಳ ಪರಿಶೀಲನೆ ನಡೆಸಿದ್ದಾರೆ.

ABOUT THE AUTHOR

...view details