ಬೆಂಗಳೂರು: ಹುಬ್ಬಳ್ಳಿ- ಧಾರವಾಡ, ಬೆಳಗಾವಿ ಮತ್ತು ಕಲಬುರ್ಗಿ ಮಹಾನಗರ ಪಾಲಿಕೆಗಳ ಚುನಾವಣೆಯಲ್ಲಿ ಬಿಜೆಪಿ ಪರ ಜನ ಒಲವು ತೋರಿದ್ದು,ರಾಜ್ಯದಲ್ಲಿ ಪಕ್ಷಕ್ಕೆ ಜನಾಶೀರ್ವಾದ ಲಭಿಸಿದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.
ಪಕ್ಷಕ್ಕೆ ಜನಾಶೀರ್ವಾದ ಲಭಿಸಿದೆ: ಅರುಣ್ ಸಿಂಗ್ - belguam local election news
ಬಿಜೆಪಿಯ ವಿಕಾಸವಾದಕ್ಕೆ ಮನ್ನಣೆ ನೀಡಿ ಬೆಂಬಲಿಸಿದ ಎಲ್ಲ ಮತಬಾಂಧವರಿಗೆ ಧನ್ಯವಾದಗಳು ಎಂದು ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗಳಿಸಿದ್ದಕ್ಕೆ ಅರುಣ್ ಸಿಂಗ್ ಸಂತಸ ವ್ಯಕ್ತಪಡಿಸಿದ್ದಾರೆ.
ಬಿಜೆಪಿಯ ವಿಕಾಸವಾದಕ್ಕೆ ಮನ್ನಣೆ ನೀಡಿ ಬೆಂಬಲಿಸಿದ ಎಲ್ಲ ಮತಬಾಂಧವರಿಗೆ ಧನ್ಯವಾದಗಳು. ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಪಕ್ಷಕ್ಕೆ ಜನಾಶೀರ್ವಾದ ಲಭಿಸಿದೆ ಎಂದು ಅರುಣ್ ಸಿಂಗ್ ಟ್ವೀಟ್ ಮಾಡಿದ್ದಾರೆ.
ಇನ್ನು ಬೆಳಗಾವಿಯಲ್ಲಿ ಬಿಜೆಪಿ ಬಹುಮತ ಪಡೆದರೆ ಹುಬ್ಬಳ್ಳಿ-ಧಾರವಾಡ ಪಾಲಿಕೆ ಚುನಾವಣೆಯಲ್ಲಿ ಅತಿ ದೊಡ್ಡ ಪಕ್ಷವಾಗಿದೆ. ಕಲಬುರ್ಗಿ ಪಾಲಿಕೆ ಚುನಾವಣೆಯಲ್ಲಿ ಹಿಂದೆಂದಿಗಿಂತಲೂ ಹೆಚ್ಚು ಸ್ಥಾನಗಳಲ್ಲಿ ಜಯಶಾಲಿಯಾಗಿ ಬಿಜೆಪಿ ಬಲವರ್ಧನೆ ಮಾಡಿದೆ. ಪಕ್ಷದ ಗೆಲುವಿಗೆ ಶ್ರಮಿಸಿದ ನಮ್ಮೆಲ್ಲಾ ಕಾರ್ಯಕರ್ತ ಬಂಧುಗಳಿಗೆ, ಪಕ್ಷದ ನಾಯಕರಿಗೆ ಹೃತ್ಪೂರ್ವಕ ಅಭಿನಂದನೆಗಳು ಎಂದು ಸಿ.ಟಿ ರವಿ ಟ್ವೀಟ್ ಮಾಡಿದ್ದಾರೆ.