ಪ್ರತಿಪಕ್ಷಗಳ ಅನುಪಸ್ಥಿತಿಯಲ್ಲಿ ನಾಲ್ಕು ವಿಧೇಯಕಕ್ಕೆ ಅಂಗೀಕಾರ..! - ವಿರೋಧ ಪಕ್ಷಗಳ ಅನುಪಸ್ಥಿತಿಯಲ್ಲಿ ನಾಲ್ಕು ವಿಧೇಯಕಗಳ ಅಂಗೀಕಾರ
ವಿರೋಧ ಪಕ್ಷಗಳ ಅನುಪಸ್ಥಿತಿಯಲ್ಲಿ ನಾಲ್ಕು ವಿಧೇಯಕಗಳನ್ನು ಸರ್ಕಾರ ವಿಧಾನಸಭೆಯಲ್ಲಿ ಅಂಗೀಕಾರ ಮಾಡಿತು. ಕಾಂಗ್ರೆಸ್ ಆಕ್ಷೇಪ ಲೆಕ್ಕಿಸದೇ ವಿಧೇಯಕಗಳಿಗೆ ಮಂಡನೆಗೆ ಸ್ಪೀಕರ್ ಅವಕಾಶ ನೀಡಿದ್ದು, ಸಿಟ್ಟಾದ ಕಾಂಗ್ರೆಸ್ ಸದಸ್ಯರು ಸಭಾತ್ಯಾಗ ಮಾಡಿದರು.
![ಪ್ರತಿಪಕ್ಷಗಳ ಅನುಪಸ್ಥಿತಿಯಲ್ಲಿ ನಾಲ್ಕು ವಿಧೇಯಕಕ್ಕೆ ಅಂಗೀಕಾರ..! pass of the four bill in the absence of the opposition party](https://etvbharatimages.akamaized.net/etvbharat/prod-images/768-512-6520900-thumbnail-3x2-net.jpg)
ಬೆಂಗಳೂರು: ವಿರೋಧ ಪಕ್ಷಗಳ ಅನುಪಸ್ಥಿತಿಯಲ್ಲಿ ನಾಲ್ಕು ವಿಧೇಯಕಗಳನ್ನು ಸರ್ಕಾರ ವಿಧಾನಸಭೆಯಲ್ಲಿ ಅಂಗೀಕಾರ ಮಾಡಿತು.
ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ ತಿದ್ದುಪಡಿ ವಿಧೇಯಕ, 2020ನೇ ಸಾಲಿನ ರೇಸ್ ಕೋರ್ಸ್ಗಳಿಗೆ ಪರವಾನಗಿ ನೀಡುವ ತಿದ್ದುಪಡಿ ವಿಧೇಯಕ, ಕೈಗಾರಿಕಾ ವಿವಾದಗಳ ತಿದ್ದುಪಡಿ ವಿಧೇಯಕ ಅಂಗೀಕಾರ, 2020ನೇ ಸಾಲಿನ ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳ ತಿದ್ದುಪಡಿ ವಿಧೇಯಕಗಳನ್ನು ಅಂಗೀಕರಿಸಲಾಗಿದೆ. ಇದಕ್ಕೂ ಮುನ್ನ ಕಲಾಪದಲ್ಲಿ ಗದ್ದಲ, ಕೋಲಾಹಲ ಉಂಟಾಯಿತು. ಕಲಾಪದಲ್ಲಿ ವಿಧೇಯಕಗಳ ಮಂಡನೆಗೆ ಮುಂದಾಗುತ್ತಿದ್ದ ಹಾಗೇ, ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿತು. ಕಲಾಪ ಸಲಹಾ ಸಮಿತಿಯಲ್ಲಿ ಇವತ್ತು ವಿಧೇಯಕಗಳ ಮಂಡನೆ ಮಾಡಲ್ಲ ಅಂತ ಒಪ್ಕೊಂಡಿದ್ರಿ. ಆದ್ರೆ ಈಗ ವಿಧೇಯಕಗಳ ಮಂಡನೆ ಮಾಡ್ತಿರೋದು ಸರಿಯಲ್ಲ ಎಂದು ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದರು.
ಕಾಂಗ್ರೆಸ್ ಆಕ್ಷೇಪ ಲೆಕ್ಕಿಸದೇ ವಿಧೇಯಕಗಳಿಗೆ ಮಂಡನೆಗೆ ಸ್ಪೀಕರ್ ಅವಕಾಶ ನೀಡಿದರು. ಸಿಟ್ಟಾದ ಕಾಂಗ್ರೆಸ್ ಸದಸ್ಯರು ಸಭಾತ್ಯಾಗ ಮಾಡಿದರು.
TAGGED:
pass of the four bill