ಬೆಂಗಳೂರು:ಕರಾವಳಿಯಲ್ಲಿ ಇಂದಿನಿಂದ ಐದು ದಿನಗಳ ಕಾಲ ಮಳೆಯಾಗಲಿದ್ದು, ಬೆಂಗಳೂರಿನಲ್ಲಿ ನಾಳೆಯಿಂದ ಮೂರು ದಿನಗಳ ಕಾಲ ವರುಣನ ಸಿಂಚನ ಇರಲಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.
ಕರಾವಳಿ, ಬೆಂಗಳೂರಿನಲ್ಲಿ ಮತ್ತೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ - The possibility of rain in Coastal areas
ಕರಾವಳಿ ಹಾಗೂ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನಲ್ಲಿ ಒಣ ಹವೆ ಮುಂದುವರಿಯಲಿದೆ ಎಂದು ತಿಳಿಸಿದೆ.
ಹವಾಮಾನ ಇಲಾಖೆ ಮುನ್ಸೂಚನೆ
ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆಯಾಗಿದ್ದು ಮುಖ್ಯವಾಗಿ ಕೊಡಗಿನ ಭಾಗಮಂಡಲದಲ್ಲಿ, ಚಾಮರಾಜನಗರದ ಬಂಡೀಪುರದಲ್ಲಿ 2 ಸೆಂ.ಮೀ ಮಳೆಯಾಗಿದೆ. ಉತ್ತರ ಒಳನಾಡಿನಲ್ಲಿ ಒಣ ಹವೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ನ. 7ರವರೆಗೆ ಮಳೆ ಆಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.