ಕರ್ನಾಟಕ

karnataka

ETV Bharat / state

ಪ್ರವಾಹದಲ್ಲಿ ಕಳೆದುಹೋದ ದಾಖಲೆಗಳನ್ನು ಉಚಿತವಾಗಿ ಪಡೆಯಿರಿ - ಪ್ರವಾಹದಲ್ಲಿ ಕಳೆದುಹೋದ ದಾಖಲೆ.

ಪದವಿ ಪೂರ್ವ ಶಿಕ್ಷಣ ಇಲಾಖೆಯ ಪದವಿ ಪೂರ್ವ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ, ಮಾಡಿರುವ ವಿದ್ಯಾರ್ಥಿಗಳ ಪ್ರಥಮ ಮತ್ತು ದ್ವಿತೀಯ ಪಿಯುಸಿ ಅಂಕಪಟ್ಟಿ ಮತ್ತು ಪಿಯುಸಿ ವ್ಯಾಸಂಗಕ್ಕೆ ಸಂಬಂಧಿಸಿದಂತೆ ದಾಖಲೆಗಳು ಪ್ರವಾಹದಿಂದ ಹಾನಿಗೊಳಗಾಗಿದ್ದರೆ, ಅಂತಹ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅಂಕಪಟ್ಟಿ ಕಳೆದುಕೊಂಡವರು ಜಿಲ್ಲಾ ಉಪನಿರ್ದೇಶಕರ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ನೀಡಿದ ವಿದ್ಯಾರ್ಥಿಗಳಿಗೆ ಉಚಿತವಾಗಿ ಅಂಕಪಟ್ಟಿ ನೀಡುವ ವ್ಯವಸ್ಥೆಯನ್ನ ಪಿಯು ಬೋರ್ಡ್​ ಕಲ್ಪಿಸಿದೆ.

ಪಿಯು ಇಲಾಖೆ ಸುತ್ತೋಲೆ

By

Published : Aug 19, 2019, 6:03 PM IST

ಬೆಂಗಳೂರು: ಪ್ರವಾಹದಲ್ಲಿ ಹಲವಾರು ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿಗಳನ್ನು ಕಳೆದುಕೊಮಡಿದ್ದಾರೆ. ಪದವಿ ಪೂರ್ವ ಶಿಕ್ಷಣ ಇಲಾಖೆಯ ಪದವಿ ಪೂರ್ವ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ, ಮಾಡಿರುವ ವಿದ್ಯಾರ್ಥಿಗಳ ಪ್ರಥಮ ಮತ್ತು ದ್ವಿತೀಯ ಪಿಯುಸಿ ಅಂಕಪಟ್ಟಿ ಮತ್ತು ಪಿ.ಯು.ಸಿ ವ್ಯಾಸಂಗಕ್ಕೆ ಸಂಬಂಧಿಸಿದಂತೆ ದಾಖಲೆಗಳು ಪ್ರವಾಹದಿಂದ ಹಾನಿಗೊಳಗಾಗಿದ್ದರೆ, ಅಂತಹ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅಂಕಪಟ್ಟಿ ಕಳೆದುಕೊಂಡವರು ಜಿಲ್ಲಾ ಉಪನಿರ್ದೇಶಕರ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ನೀಡಿದ ವಿದ್ಯಾರ್ಥಿಗಳಿಗೆ ಉಚಿತವಾಗಿ ಅಂಕಪಟ್ಟಿ ನೀಡುವ ವ್ಯವಸ್ಥೆಯನ್ನ ಪಿಯು ಬೋರ್ಡ್​ ಕಲ್ಪಿಸಿದೆ.

ಪಿಯು ಇಲಾಖೆ ಸುತ್ತೋಲೆ

ಸಂಬಂಧಪಟ್ಟ ಕಾಲೇಜು ಮತ್ತು ಜಿಲ್ಲೆಯ ಉಪನಿರ್ದೇಶಕರ ಮುಖಾಂತರ ಪದವಿಪೂರ್ವ ಶಿಕ್ಷಣ ಇಲಾಖೆಗೆ ಅರ್ಜಿ ಸಲ್ಲಿಸಿದ ತಕ್ಷಣ ವಿದ್ಯಾರ್ಥಿಗಳ ದ್ವಿಪ್ರತಿ ಅಂಕಪಟ್ಟಿ ಮತ್ತು ಇತರೆ ಪಿಯುಸಿ ಶಿಕ್ಷಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಶುಲ್ಕ ರಹಿತವಾಗಿ ಇಲಾಖೆಯಿಂದ ನೀಡಲಾಗುವುದು ಎಂದು ಇಲಾಖೆ ಸುತ್ತೊಲೆ ಹೊರಡಿಸಿದೆ.

ಪ್ರವಾಹ ಪೀಡಿತ ಜಿಲ್ಲೆಗಳ ಉಪನಿರ್ದೇಶಕರು ತಮ್ಮ ಜಿಲ್ಲಾ ವ್ಯಾಪ್ತಿಗೆ ಬರುವ ಎಲ್ಲಾ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಈ ಬಗ್ಗೆ ಮಾಹಿತಿ ತಲುಪಿಸಬೇಕು. ವಿದ್ಯಾರ್ಥಿಗಳು ಕಳೆದುಕೊಂಡಿರುವ ದಾಖಲೆಗಳನ್ನು ತ್ವರಿತವಾಗಿ ಪಡೆದುಕೊಳ್ಳಲು ಅನುವು ಮಾಡಿಕೊಡಲು ಸೂಚಿಸಿದೆ.

ಇನ್ನು, ದಾಖಲೆಗಳನ್ನು ಪಡೆಯಲು ವಿದ್ಯಾರ್ಥಿಗಳು ಅಥವಾ ಪೋಷಕರು ಪದವಿಪೂರ್ವ ಶಿಕ್ಷಣ ಇಲಾಖೆ ಕೇಂದ್ರ ಕಚೇರಿಗೆ ಭೇಟಿ ನೀಡುವ ಅಗತ್ಯ ಇರುವುದಿಲ್ಲ. ಪ್ರವಾಹ ಪೀಡಿತ ಜಿಲ್ಲೆಗಳ ಉಪನಿರ್ದೇಶಕರ ಮುಖಾಂತರ ಅರ್ಜಿ ಸ್ವೀಕರಿಸಿದ ನಂತರ ದಾಖಲೆಗಳನ್ನು ವಿದ್ಯಾರ್ಥಿಗಳಿಗೆ ಸಂಬಂಧಪಟ್ಟ ಉಪ ನಿರ್ದೇಶಕರ ಕಚೇರಿ/ಕಾಲೇಜುಗಳಿಗೆ ತಲುಪಿಸಲಾಗುವುದು. ಕೆಲವು ಶೈಕ್ಷಣಿಕ ದಾಖಲೆ ಪತ್ರಗಳನ್ನು ಜಿಲ್ಲೆಯ ಉಪನಿರ್ದೇಶಕರು ಅಥವಾ ಕಾಲೇಜು ಹಂತದಲ್ಲಿಯೇ ನೀಡಬಹುದಾಗಿದೆ ಎಂದು ಪಿಯು ಬೋರ್ಡ್​ ತಿಳಿಸಿದೆ.

ABOUT THE AUTHOR

...view details