ಕರ್ನಾಟಕ

karnataka

ETV Bharat / state

ರಾಜ್ಯ ಕಾಂಗ್ರೆಸ್​ ಉಸ್ತುವಾರಿ ಸ್ಥಾನಕ್ಕೆ ವೇಣುಗೋಪಾಲ್​ ರಾಜೀನಾಮೆ...! - KC Venugopal resigns

ಉಪ ಸಮರ ಸೋಲಿನ ನೈತಿಕ ಜವಾಬ್ದಾರಿ ಹೊತ್ತು ವಿಪಕ್ಷ ನಾಯಕ ಸಿದ್ದರಾಮ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ದಿನೇಶ್​​ ಗುಂಡೂರಾವ್​ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲೆ ರಾಜ್ಯ ಕಾಂಗ್ರೆಸ್​ ಉಸ್ತುವಾರಿ ಕೆ.ಸಿ ವೇಣುಗೋಪಾಲ್​ ಸಹ ಅದೇ ನಿರ್ಧಾರಕ್ಕೆ ಬಂದಿದ್ದಾರೆ.

The resignation of KC Venugopal in charge of the State Congress
ವೇಣುಗೋಪಾಲ್​ ರಾಜೀನಾಮೆ...!

By

Published : Dec 10, 2019, 4:00 PM IST

ಬೆಂಗಳೂರು: ಉಪ ಸಮರ ಸೋಲಿನ ನೈತಿಕ ಜವಾಬ್ದಾರಿ ಹೊತ್ತು ವಿಪಕ್ಷ ನಾಯಕ ಸಿದ್ದರಾಮ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ದಿನೇಶ್​​ ಗುಂಡೂರಾವ್​ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲೆ ರಾಜ್ಯ ಕಾಂಗ್ರೆಸ್​ ಉಸ್ತುವಾರಿ ಕೆ.ಸಿ ವೇಣುಗೋಪಾಲ್​ ಸಹ ಅದೇ ನಿರ್ಧಾರಕ್ಕೆ ಬಂದಿದ್ದಾರೆ.

ಮೂಲಗಳ ಪ್ರಕಾರ ವೇಣುಗೋಪಾಲ್​ ಅವರು ತಮ್ಮ ರಾಜೀನಾಮೆ ಪತ್ರವನ್ನು ಈಗಾಗಲೇ ಕಾಂಗ್ರೆಸ್ ನಾಯಕಿ ಸೋನಿಯಾಗಾಂಧಿಯವರಿಗೆ ರವಾನಿಸಿದ್ದಾರೆ ಎಂದು ತಿಳಿದು ಬಂದಿದೆ. ಮಾತ್ರವಲ್ಲದೆ ಮುಂದಿನ ವಾರದೊಳಗೆ ರಾಜ್ಯ ಕಾಂಗ್ರೆಸ್ ಗೆ ನೂತನ ಉಸ್ತುವಾರಿಯನ್ನು ನೇಮಿಸಲು ತೀರ್ಮಾನಿಸಲಾಗಿದೆ.

ರಾಜ್ಯದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ನಿರೀಕ್ಷಿತ ಫಲಿತಾಂಶವನ್ನು ಪಡೆದುಕೊಳ್ಳದ ಕಾರಣಕ್ಕೆ ವೇಣುಗೋಪಾಲ್ ಉಸ್ತುವಾರಿ ಸ್ಥಾನ ತೊರೆಯಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ನಿನ್ನೆ ಫಲಿತಾಂಶದ ಬಳಿಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರ ಸ್ಥಾನಕ್ಕೆ ದಿನೇಶ್‌ ಗುಂಡೂರಾವ್‌ ಅವರು ರಾಜೀನಾಮೆ ನೀಡಿದ್ದರು. ಈಗ ಈ ಸಾಲಿಗೆ ಕೆ.ಸಿ.ವೇಣುಗೋಪಾಲ್ ಸೇರಿಕೊಂಡಿದ್ದಾರೆ.

ABOUT THE AUTHOR

...view details