ಬೆಂಗಳೂರು:ಮೆಟ್ರೋ ಕಾಮಗಾರಿ ವೇಳೆ ಪಿಲ್ಲರ್ ಬಿದ್ದು ಇಬ್ಬರು ಸಾವನ್ನಪ್ಪಿರುವ ಘಟನೆ ಮಾಸುವ ಮುನ್ನವೇ ನಗರದಲ್ಲಿ ಮತ್ತೊಂದು ದುರ್ಘಟನೆ ಸಂಭವಿಸಿರುವುದು ಬೆಳಕಿಗೆ ಬಂದಿದೆ.ಏಕಾಏಕಿ ರಸ್ತೆ ಮಧ್ಯೆದಲ್ಲೇ ಗುಂಡಿ ಬಿದ್ದಿದ್ದು, ಬೈಕ್ ಸವಾರನೊಬ್ಬ ಆ ಗುಂಡಿಗೆ ಬಿದ್ದು ಗಾಯಗೊಂಡಿರುವ ಘಟನೆ ಜಾನ್ಸನ್ ಮಾರ್ಕೆಟ್ ರಸ್ತೆಯಲ್ಲಿ ನಡೆದಿದೆ. ನಿತ್ಯದಂತೆ ವಾಹನ ಸವಾರರು ಪ್ರಯಾಣಿಸುತ್ತಿದ್ದರು. ಈ ವೇಳೆ, ಏಕಾಏಕಿ ರಸ್ತೆ ಮಧ್ಯೆದಲ್ಲಿ ಗುಂಡಿ ಬಿದ್ದಿದೆ. ಆದರೆ ಬೈಕ್ ಸವಾರ ಈ ಗುಂಡಿಗೆ ಬಿದ್ದು ಗಾಯಗೊಂಡಿದ್ದಾನೆ ಎನ್ನಲಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ನಗರದ ಜಾನ್ಸನ್ ಮಾರ್ಕೆಟ್ ರಸ್ತೆಯಲ್ಲಿ ಏಕಾಏಕಿ ನಡುರಸ್ತೆ ಮಧ್ಯೆ ವೃತಾಕಾರದ ಗುಂಡಿ ಬಾಯ್ತೆರೆದಿದ್ದು ಅದೃಷ್ಟವಶಾತ್ ಆಗಬೇಕಿದ್ದ ಅನಾಹುತ ತಪ್ಪಿದಂತಾಗಿದೆ. ದಿನಕ್ಕೆ ಲಕ್ಷಾಂತರ ವಾಹನ ಓಡಾಡುವ ಅಶೋಕನಗರ ಸಂಚಾರ ಠಾಣಾ ವ್ಯಾಪ್ತಿಯ ಜಾನ್ಸನ್ ಮಾರ್ಕೆಟ್ರಸ್ತೆಯಲ್ಲಿ ಇಂದು ಏಕಾಏಕಿ ಎರಡು ಅಡಿ ಆಳದ ರಸ್ತೆ ಗುಂಡಿ ತೆರೆದಿದೆ. ಇದೇ ದಾರಿಯಲ್ಲಿ ಬರುತ್ತಿದ್ದ ಬೈಕ್ ಸವಾರ ಬಿದ್ದು ಗಾಯಗೊಂಡಿದ್ದಾನೆ ಎಂದು ತಿಳಿದು ಬಂದಿದೆ.
ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಸಮೀಪದ ಖಾಸಗಿ ಆಸ್ಪತ್ರೆ ದಾಖಲಿಸಲಾಗಿದೆ. ಮಾಹಿತಿ ಹಿನ್ನೆಲೆ ಪೂರ್ವ ವಿಭಾಗದ ಡಿಸಿಪಿ ಕಲಾ ಕೃಷ್ಣಮೂರ್ತಿ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ. ಏಕಾಏಕಿ ರಸ್ತೆ ಗುಂಡಿ ಉದ್ಬವಿಸಿದ್ದರಿಂದ ಸುತ್ತಮುತ್ತಲಿನ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಹೆಚ್ಚಾಗಿದ್ದು, ಸಂಚಾರ ನಿಯಂತ್ರಣಕ್ಕಾಗಿ ಪೊಲೀಸರು ಮಾರ್ಗ ಬದಲಾವಣೆ ಮಾಡಿದ್ದಾರೆ. ಆಡುಗೋಡಿಯಿಂದ ಶಿವಾಜಿನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದೆ. ಸುರಂಗ ಮಾರ್ಗದಲ್ಲಿ ಮೆಟ್ರೋ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆ ರಸ್ತೆ ಮದ್ಯಭಾಗದಲ್ಲಿ ಮಣ್ಣು ಸಡಿಲವಾಗಿದೆ ಎಂದು ಹೇಳಲಾಗುತ್ತಿದೆ. ಸದ್ಯ ಟ್ರಾಫಿಕ್ ಪೊಲೀಸರು ರಸ್ತೆಯ ಎರಡು ಭಾಗಗಳ ವಾಹನ ಸಂಚಾರ ನಿರ್ಬಂಧಿಸಿದ್ದಾರೆ.
ಬಿಎಂಆರ್‌ಸಿಎಲ್ ಅಧಿಕಾರಿಗಳ ಪ್ರತಿಕ್ರಿಯೆ:ಸಂಜೆಯ ವೇಳೆ ಸ್ಥಳಕ್ಕೆ ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅಂಜುಮ್ ಪರ್ವೇಜ್, ಹಿರಿಯ ಎಂಜಿನಿಯರ್‌ಗಳು, ಪೂರ್ವ ಸಂಚಾರ ವಿಭಾಗದ ಡಿಸಿಪಿ ಕಲಾ ಕೃಷ್ಣಸ್ವಾಮಿ ಅವರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಈ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಬಿಎಂಆರ್‌ಸಿಎಲ್ ಎಂಡಿ ಅಂಜುಮ್ ಪರ್ವೇಜ್, ನಾಲ್ಕು ದಿನಗಳ ಹಿಂದೆ ಸುರಂಗ ಕೊರೆಯುವ ಟಿಬಿಎಂ ಇದೇ ಜಾಗದಿಂದ ಹಾದು ಹೋಗಿದೆ. ಟಿಬಿಎಂ ಹೋದ ಸ್ಥಳದಲ್ಲಿ ಕಾಂಕ್ರಿಟ್ ಪಿಲ್ಲರ್ ಕೂಡ ಅಳವಡಿಕೆ ಮಾಡಲಾಗಿದೆ. ಆದರೂ ಹೇಗೆ ಕುಸಿತ ಉಂಟಾಯಿತು ಎಂಬುದರ ಬಗ್ಗೆ ಹಿರಿಯ ಎಂಜಿನಿಯರ್‌ಗಳಿಂದ ತಪಾಸಣೆ ಮಾಡಿಸಲಾಗುವುದು. ಜನತೆ ಆತಂಕಪಡುವ ಅಗತ್ಯವಿಲ್ಲ. ಗುಂಡಿ ಬಿದ್ದ ಸ್ಥಳವನ್ನು ಕಾಂಕ್ರಿಟ್ ಹಾಕಿ ಮುಚ್ಚಲಾಗಿದೆ ಎಂದು ತಿಳಿಸಿದರು.
ಮಂಗಳವಾರ ಸಂಭವಿಸಿದ್ದ ದುರಂತ ಘಟನೆ:ಬೈಕ್ನಲ್ಲಿ ಮಕ್ಕಳನ್ನು ಶಿಶು ವಿಹಾರಕ್ಕೆ ಬಿಡಲು ತೆರಳುತ್ತಿದ್ದವರ ಮೇಲೆ ಬೆಂಗಳೂರು ನಮ್ಮ ಮೆಟ್ರೋ ರೈಲು ಯೋಜನೆಯ ನಿರ್ಮಾಣ ಹಂತದ ಕಬ್ಬಿಣದ ಪಿಲ್ಲರ್ ಕುಸಿದು ಬಿದ್ದಿತ್ತು. ಕಳೆದ ಮಂಗಳವಾರ ಬೆಳಗ್ಗೆ 10:30 ಸುಮಾರಿಗೆ ಈ ದುರ್ಘಟನೆ ಸಂಭವಿಸಿತ್ತು. ಈ ಘಟನೆಯಲ್ಲಿ ತಾಯಿ - ಮಗ ಸಾವನ್ನಪ್ಪಿದ್ದು, ತಂದೆ ಮಗಳು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದರು.