ಬೆಂಗಳೂರು: ಇನ್ಪೋಸಿಸ್ ಕಂಪೆನಿಯ ಸಂಸ್ಥಾಪಕಿ ಸುಧಾಮೂರ್ತಿ ಹೆಸರಿನಲ್ಲಿ ನಕಲಿ ಲೆಟರ್ ಹೆಡ್ ಸೃಷ್ಟಿಸಿ, ಫೋರ್ಜರಿ ಸಹಿ ಮಾಡಿದ್ದ ಆರೋಪಿಯನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ.
ಸುಧಾಮೂರ್ತಿ ಹೆಸರಿನಲ್ಲಿ ಫೋರ್ಜರಿ ಸಹಿ...ಹೈದ್ರಾಬಾದ್ ಮೂಲದ ಟೆಕ್ಕಿ ವಶ
ಮೊಬೈಲ್ ಅಪ್ಲಿಕೇಶನ್ ಬ್ರ್ಯಾಂಡ್ ಅಂಬಾಸಿಡರ್ ಆಗುವಂತೆ ಟೆಕ್ಕಿಯೊಬ್ಬ ಕಳೆದ ವರ್ಷ ಟಾಲಿವುಡ್ ಸ್ಟಾರ್ ವಿಜಯ ದೇವರಕೊಂಡ ಅವರಿಗೆ ಸುಧಾಮೂರ್ತಿ ಹೆಸರಿನಲ್ಲಿ ನಕಲಿ ಲೆಟರ್ ಹೆಡ್ ಸೃಷ್ಟಿಸಿ ಫೋರ್ಜರಿ ಸಹಿ ಮಾಡಿ ರಿಜಿಸ್ಟರ್ ಪೋಸ್ಟ್ ಮಾಡಿದ್ದ ಆರೋಪಿಯನ್ನ ಜಯನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹೈದರಾಬಾದ್ ಮೂಲದ ಟೆಕ್ಕಿ ಎಲ್. ಸಾಯಿಕೃಷ್ಣ ಬಂಧಿತ ಆರೋಪಿ. ಆಫೀಸರ್ ನಿಯರ್ ಬೈ ಎಂಬ ಮೊಬೈಲ್ ಅಪ್ಲಿಕೇಶನ್ ಬ್ರ್ಯಾಂಡ್ ಅಂಬಾಸಿಡರ್ ಆಗುವಂತೆ ಟೆಕ್ಕಿ ಕಳೆದ ವರ್ಷ ಟಾಲಿವುಡ್ ಸ್ಟಾರ್ ವಿಜಯ ದೇವರಕೊಂಡ ಅವರಿಗೆ ಸುಧಾಮೂರ್ತಿ ಹೆಸರಿನಲ್ಲಿ ನಕಲಿ ಲೆಟರ್ ಹೆಡ್ ಸೃಷ್ಟಿಸಿ ಪೋರ್ಜರಿ ಸಹಿ ಮಾಡಿ ರಿಜಿಸ್ಟರ್ ಪೋಸ್ಟ್ ಮಾಡಿದ್ದ.
ಈ ಸಂಬಂಧ ಫೆ.26 ರಂದು ಆರೋಪಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಇನ್ಫೋಸಿಸ್ ಫೌಂಡೇಷನ್ ಕಚೇರಿಯ ಲೆ.ಕರ್ನಲ್ ರಮೇಶ್ ಎಂಬುವರು ಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರಿನ ಹಿನ್ನೆಲೆಯಲ್ಲಿ ಐಪಿಸಿ 419, 465, 471, 468 ಅಡಿ ಕೇಸ್ ದಾಖಲಾಗಿತ್ತು. ಸದ್ಯ ಆರೋಪಿಯನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.