ಬೆಂಗಳೂರು: ಕೊರೊನಾ ಲಾಕ್ಡೌನ್ ಹಿನ್ನೆಲೆ ವಲಸೆ ಕಾರ್ಮಿಕರು ಸಾಕಷ್ಟು ಸಂಕಷ್ಟ ಎದುರಿಸುತ್ತಿದ್ದಾರೆ. ಇದೀಗ ಕಾರ್ಮಿಕರ ನೆರವಿಗೆ ಬಂದಿರುವ ಸರ್ಕಾರ, ಕಲ್ಯಾಣ ಮಂಟಪಗಳನ್ನು ವಶಕ್ಕೆ ಪಡೆದು ವಸತಿ ಹಾಗೂ ಊಟದ ವ್ಯವಸ್ಥೆ ಕಲ್ಲಿಸಲು ಆದೇಶ ನೀಡಿದೆ.
ವಲಸೆ ಕಾರ್ಮಿಕರ ನೆರವಿಗೆ ಮುಂದಾದ ರಾಜ್ಯ ಸರ್ಕಾರ - ಕೊರೊನಾ ಸುದ್ದಿ
ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿನ ಪ್ರತಿ ವಾರ್ಡ್ಗೆ ಒಂದರಂತೆ ಸಮುದಾಯ ಭವನ, ಕಲ್ಯಾಣ ಮಂಟಪ, ಖಾಸಗಿ ಕಲ್ಯಾಣ ಮಂಟಪಗಳನ್ನು ಆಯಾ ಜಿಲ್ಲಾಧಿಕಾರಿಗಳು ವಶಕ್ಕೆ ಪಡೆಯುವಂತೆ ಸರ್ಕಾರ ಆದೇಶ ನೀಡಿದೆ.
ಬೆಂಗಳೂರು
ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿನ ಪ್ರತಿ ವಾರ್ಡ್ಗೆ ಒಂದರಂತೆ ಸಮುದಾಯ ಭವನ, ಕಲ್ಯಾಣ ಮಂಟಪ, ಖಾಸಗಿ ಕಲ್ಯಾಣ ಮಂಟಪಗಳನ್ನು ಆಯಾ ಜಿಲ್ಲಾಧಿಕಾರಿಗಳು ವಶಕ್ಕೆ ಪಡೆಯುವಂತೆ ಸರ್ಕಾರ ಆದೇಶ ನೀಡಿದೆ. ಆ ಕಲ್ಯಾಣ ಮಂಟಪಗಳಲ್ಲಿ ಕಟ್ಟಡ ಹಾಗೂ ವಲಸೆ ಕಾರ್ಮಿಕರಿಗೆ ವಸತಿ ಹಾಗೂ ಊಟೋಪಚಾರದ ವ್ಯವಸ್ಥೆ ಮಾಡಲು ನಿರ್ದೇಶಿಸಲಾಗಿದೆ.
ಗ್ರಾಮಾಂತರ ಪ್ರದೇಶಗಳಲ್ಲಿ ಪ್ರತಿ ತಾಲೂಕಿಗೆ ಒಂದರಂತೆ ಕಲ್ಯಾಣ ಮಂಟಪಗಳನ್ನು ವಶಕ್ಕೆ ಪಡೆದು ಕಾರ್ಮಿಕರ ವಸತಿಗೆ ವ್ಯವಸ್ಥೆ ಮಾಡುವಂತೆ ಸೂಚಿಸಲಾಗಿದೆ.