ಕರ್ನಾಟಕ

karnataka

ETV Bharat / state

ಸರ್ಕಾರದಿಂದ ಪ್ರವಾಹ ಪೀಡಿತರಿಗೆ 195 ಕೋಟಿ ರೂ. ಬಿಡುಗಡೆ: ಪ್ರತಿ ಕುಟುಂಬಕ್ಕೆ ತಲಾ 10 ಸಾವಿರ - kannada news

ಪ್ರವಾಹ ಪರಿಹಾರ ಕಾರ್ಯಗಳಿಗೆ ರಾಜ್ಯ ಸರ್ಕಾರ ಒಟ್ಟು 195 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಬಟ್ಟೆ-ಬರೆ ಹಾಗೂ ದಿನ ಬಳಕೆಯ ವಸ್ತುಗಳಿಗಾಗಿ ಪ್ರತಿ ಕುಟುಂಬಕ್ಕೆ 10 ಸಾವಿರ ರೂ.ಗಳಂತೆ ವಿತರಿಸಲು ರಾಜ್ಯ ವಿಪತ್ತು ನಿರ್ವಹಣಾ ನಿಧಿಯಡಿ 80 ಕೋಟಿ ರೂ. ಅನುದಾನ ಮಂಜೂರು ಮಾಡಲಾಗಿದೆ.

ಅನುದಾನ ಮಂಜೂರು

By

Published : Aug 19, 2019, 10:27 PM IST

ಬೆಂಗಳೂರು:ಪ್ರವಾಹ ಪರಿಸ್ಥಿತಿಯನ್ನು ನಿರ್ವಹಿಸಲು, ಪರಿಹಾರ ಕಾರ್ಯಗಳಿಗೆ ಹಾಗೂ ನೆರೆ ಸಂತ್ರಸ್ತರಿಗೆ ಬಟ್ಟೆ ಬರೆ ಮತ್ತಿತರ ಸೌಲಭ್ಯ ಒದಗಿಸಲು ರಾಜ್ಯ ಸರ್ಕಾರ ಒಟ್ಟು 195 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ.

ರಾಜ್ಯದಲ್ಲಿ ಪ್ರವಾಹ ಪೀಡಿತ ತಾಲೂಕುಗಳಲ್ಲಿ ಸಂತ್ರಸ್ತರಿಗೆ ಬಟ್ಟೆ-ಬರೆ ಹಾಗೂ ದಿನ ಬಳಕೆಯ ವಸ್ತುಗಳಿಗಾಗಿ ಪ್ರತಿ ಕುಟುಂಬಕ್ಕೆ 10 ಸಾವಿರ ರೂ.ಗಳಂತೆ ವಿತರಿಸಲು ರಾಜ್ಯ ವಿಪತ್ತು ನಿರ್ವಹಣಾ ನಿಧಿಯಡಿ ಸರ್ಕಾರದ ಹೆಚ್ಚುವರಿ ಪಾಲಿನ ಅನುದಾನದಿಂದ 80 ಕೋಟಿ ರೂ. ಅನುದಾನ ಮಂಜೂರು ಮಾಡಲಾಗಿದೆ.

ಅಲ್ಲದೆ, ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಉಂಟಾಗಿರುವ ನೆರೆ ಪರಿಸ್ಥಿತಿಯನ್ನು ನಿರ್ವಹಿಸಲು ಮತ್ತು ಪರಿಹಾರ ಕಾರ್ಯಗಳಿಗಾಗಿ ಸರ್ಕಾರದಿಂದ 115 ಕೋಟಿ ರೂ. ಅನುದಾನವನ್ನು ಜಿಲ್ಲಾಧಿಕಾರಿಗಳಿಗೆ ಬಿಡುಗಡೆ ಮಾಡಲಾಗಿದೆ.

ABOUT THE AUTHOR

...view details