ಕರ್ನಾಟಕ

karnataka

ETV Bharat / state

ಸುಪ್ರೀಂಕೋರ್ಟ್​ ರೈತ ವಿರೋಧಿ ಕಾಯ್ದೆಗಳನ್ನು ರದ್ದು ಮಾಡಬೇಕು: ಸಚಿನ್ ಮೀಗಾ ಮನವಿ

ಸುಪ್ರೀಂಕೋರ್ಟ್​ ಈ ಮೂರೂ ರೈತ ವಿರೋಧಿ ಕಾಯ್ದೆಗಳನ್ನು ರದ್ದು ಮಾಡಬೇಕು ಎಂದು ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಮೀಗಾ ಮನವಿ ಮಾಡಿಕೊಂಡಿದ್ದಾರೆ.

sachin meega
ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಮೀಗಾ

By

Published : Jan 13, 2021, 6:59 AM IST

ಬೆಂಗಳೂರು: ಕೇಂದ್ರ ಸರ್ಕಾರದ ಮೂರು ರೈತ ವಿರೋಧಿ ಕಾಯ್ದೆಗಳನ್ನು ಸರ್ವೋಚ್ಛ ನ್ಯಾಯಾಲಯ ಕೇವಲ ತಡೆ ಹಿಡಿದಿರುವ ಕ್ರಮವನ್ನು ಕರ್ನಾಟಕ ಕಿಸಾನ್ ಕಾಂಗ್ರೆಸ್ ಒಪ್ಪುವುದಿಲ್ಲ. ಬದಲಿಗೆ ಸರ್ವೋಚ್ಛ ನ್ಯಾಯಾಲಯ ಈ ಮೂರೂ ರೈತ ವಿರೋಧಿ ಕಾಯ್ದೆಗಳನ್ನು ರದ್ದು ಮಾಡಬೇಕು ಎಂದು ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಮೀಗಾ ಮನವಿ ಮಾಡಿಕೊಂಡಿದ್ದಾರೆ.

ರೈತ ವಿರೋಧಿ ಕಾಯ್ದೆಗಳನ್ನು ರದ್ದು ಮಾಡುವವರೆಗೂ ಕರ್ನಾಟಕ ಕಿಸಾನ್ ಕಾಂಗ್ರೆಸ್ ಹೋರಾಟ ನಡೆಸುತ್ತದೆ. ಜನವರಿ 26ರ ಗಣರಾಜ್ಯೋತ್ಸವಕ್ಕೆ ರೈತ ಹೋರಾಟದಿಂದ ತೊಂದರೆ ಆಗುವ ಸಂಭವವಿದೆ. ಕಾರ್ಯಕ್ರಮವನ್ನು ಸುಸೂತ್ರವಾಗಿ ನಡೆಸುವ ಉದ್ದೇಶ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಇದ್ದು, ತೊಂದರೆಯಿಂದ ತಪ್ಪಿಸಿಕೊಳ್ಳಬೇಕಿದೆ.

ಈ ಸುದ್ದಿಯನ್ನೂ ಓದಿ:ನಾವು ಯಾವುದೇ ಸಮಿತಿ ಮುಂದೆ ಹಾಜರಾಗುವುದಿಲ್ಲ: ರೈತ ಸಂಘಟನೆಗಳು

ಕಾಯ್ದೆ ರದ್ದು ಆಗುವವರೆಗೂ ಚಳವಳಿ ನಡೆಸುತ್ತೇವೆ ಎಂದು ಕರ್ನಾಟಕ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಮೀಗಾ ತಿಳಿಸಿದ್ದಾರೆ.

ABOUT THE AUTHOR

...view details