ಬೆಂಗಳೂರು: ಬಹುಕೋಟಿ ವಂಚನೆಯ ಅಭಿವದ್ಧಿ ಹಕ್ಕು ವರ್ಗಾವಣೆ ಪ್ರಕರಣದ ತನಿಖೆಯನ್ನು ಎಸ್‌ಐಟಿ ಬದಲಿಗೆ ಭ್ರಷ್ಟಾಚಾರ ನಿಗ್ರಹ ದಳವೇ ಮುಂದುವರಿಸಲಿ ಎಂದು ಹೈಕೋರ್ಟ್ ಆದೇಶಿಸಿದೆ.
ಟಿಡಿಆರ್ ಹಗರಣ : ಎಸ್‌ಐಟಿ ಬದಲು ಎಸಿಬಿ ತನಿಖೆಗೆ ಹೈಕೋರ್ಟ್ ಆದೇಶ - Karnataka crime news
ಬಹುಕೋಟಿ ವಂಚನೆಯ ಅಭಿವದ್ಧಿ ಹಕ್ಕು ವರ್ಗಾವಣೆ ಪ್ರಕರಣದ ತನಿಖೆಯನ್ನು ಎಸ್‌ಐಟಿ ಬದಲಿಗೆ ಭ್ರಷ್ಟಾಚಾರ ನಿಗ್ರಹ ದಳವೇ ಮುಂದುವರಿಸಲಿ ಎಂದು ಹೈಕೋರ್ಟ್ ಆದೇಶಿಸಿದೆ.
ಹೈಕೋರ್ಟ್
ಟಿಡಿಆರ್ ಪ್ರಕರಣದ ತನಿಖೆಯನ್ನು ಎಸ್‌ಐಟಿ ನಡೆಸಲಿ ಎಂದು ಏಕಸದಸ್ಯ ನ್ಯಾಯಪೀಠ ನೀಡಿದ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ವಿಭಾಗೀಯ ಪೀಠ ಈ ಆದೇಶ ಹೊರಡಿಸಿದೆ.
ಟಿಡಿಆರ್ ಪ್ರಕರಣವು ಗಂಭೀರ ಸ್ವರೂಪದ್ದಾಗಿದ್ದು, ಈ ಪ್ರಕರಣದ ತನಿಖೆಯನ್ನು ಎಸಿಬಿ ಅವರೇ ನಡೆಸಲಿ. ಹಾಗೇ ತನಿಖಾಧಿಕಾರಿ ಯಾರಾಗಬೇಕೆಂಬುದನ್ನು ಎಸಿಬಿ ಐಜಿಪಿ ನಿರ್ಧಾರ ಮಾಡಲಿ ಎಂದು ಹೈಕೋರ್ಟ್ ವಿಭಾಗೀಯ ಪೀಠ ಆದೇಶಿಸಿದೆ.