ಬೆಂಗಳೂರು: "ನನ್ನನ್ನು ಮತ್ತು ನನ್ನ ಮಕ್ಕಳನ್ನು ಪತಿ ಮನೆಯಿಂದ ಹೊರ ಹಾಕಿದ್ದು, ನನಗೆ ಜೀವ ಬೆದರಿಕೆಯಿದೆ. ಆತ ಯಾವುದೇ ಕ್ಷಣದಲ್ಲೂ ನಮ್ಮನ್ನು ಕೊಲ್ಲಬಹುದು" ಎಂದು ಆರೋಪಿಸಿ ಮಹಿಳೆಯೊಬ್ಬರು ಮಕ್ಕಳ ಸಹಿತ ವಿಡಿಯೋ ಮಾಡಿ ರಕ್ಷಣೆ ಕೋರಿದ್ದಾರೆ.
ಈ ಸಂಬಂಧ ಹೈದರಾಬಾದ್ ಮೂಲದ ಪೂಜಾ ಗಾಂಧಿ ಎಂಬುವವರು ಪತಿ ವೈಭವ್ ಜೈನ್ ಮತ್ತು ಗೀತಿಕಾ ಬಿಂದನಂ, ರೋಹನ್ ಸಾಲ್ಯಾನ್ ಎಂಬುವವರಿಂದ ಪ್ರಾಣ ಬೆದರಿಕೆ ಇದೆ ಎಂದು ಕೊತ್ತನೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಮತ್ತೊಂದೆಡೆ ಪೂಜಾ ಗಾಂಧಿ ರಕ್ಷಣೆ ಕೋರಿ ಮಾಡಿರುವ ಸೆಲ್ಫಿ ವಿಡಿಯೋವನ್ನು ಆಕೆಯ ಸಹೋದರ ರಾಹುಲ್ ಗಾಂಧಿ ಸಾಮಾಜಿಕ ಜಾಲತಾಣ"x" ನಲ್ಲಿ ಹಂಚಿಕೊಂಡು ನಗರ ಪೊಲೀಸ್ ಆಯುಕ್ತರು, ಪ್ರಧಾನ ಮಂತ್ರಿ, ಕೇಂದ್ರ ಸಚಿವರಿಗೆ, ಮುಖ್ಯಮಂತ್ರಿಗೆ ಹಾಗೂ ಇತರರಿಗೆ ಟ್ಯಾಗ್ ಮಾಡಿದ್ದಾರೆ.
ವೈಭವ್ ಜೈನ್ ಜೊತೆ ಪೂಜಾಗಾಂಧಿ ಆರು ವರ್ಷಗಳ ಹಿಂದೆ ಮದುವೆಯಾಗಿದ್ದು, ದಂಪತಿಗೆ ಇಬ್ಬರು ಮಕ್ಕಳು ಇದ್ದು, ಕೊತ್ತನೂರಿನಲ್ಲಿ ವಾಸವಾಗಿದ್ದಾರೆ. ಕೌಟುಂಬಿಕ ವಿಚಾರಕ್ಕೆ ದಂಪತಿ ನಡುವೆ ಗಲಾಟೆಯಾಗಿದೆ. ಅಲ್ಲದೇ, ಪತ್ನಿ ಪೂಜಾ ಗಾಂಧಿ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿದ್ದು, ಮಕ್ಕಳ ಸಮೇತ ಮನೆಯಿಂದ ಹೊರಹಾಕಿದ್ದಾನೆ.
ಅಲ್ಲದೇ, ಪ್ರಾಣ ಬೆದರಿಕೆಯನ್ನೂ ಹಾಕಿದ್ದಾನೆ. ಆತ ಮಾತ್ರವಲ್ಲದೇ, ಆತನ ಸಂಬಂಧಿಕರಿಂದಲೂ ಪ್ರಾಣ ಬೆದರಿಕೆ ಇದೆ. ಯಾವುದೇ ಕ್ಷಣದಲ್ಲೂ ನಮ್ಮನ್ನು ಕೊಲ್ಲಬಹುದು ಎಂದು ಪೂಜಾಗಾಂಧಿ ವಿಡಿಯೋದಲ್ಲಿ ಆರೋಪಿಸಿದ್ದಾರೆ. ದೂರು ಕೂಡ ನೀಡಿದ್ದಾರೆ. ಕೊತ್ತನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಕುರಿತು ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪತ್ನಿ ಮಕ್ಕಳನ್ನು ಹತ್ಯೆ ಮಾಡಿ ನೇಣಿಗೆ ಶರಣು:ಬೆಂಗಳೂರಿನಲ್ಲಿಯೇ ಒಂದೇ ಕುಟಂಬದ ನಾಲ್ವರು ಸಾವನ್ನಪ್ಪಿದ್ದರು. ಅಸಲಿಗೆ ಆಂಧ್ರಮೂಲದ ವಿರಾರ್ಜುನ ಎನ್ನುವಾತ ತನ್ನ ಹೆಂಡತಿ ಮತ್ತು ಇಬ್ಬರು ಮಕ್ಕಳನ್ನು ಹತ್ಯೆ ಮಾಡಿ ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದರು. ಘಟನೆ ಜುಲೈ 31 ಕ್ಕೆ ನಡೆದಿದೆ. ಆದರೆ, ಬೆಳಕಿಗೆ ಬರುವಾಗ 3 ದಿನವಾಗಿತ್ತು. ಸಾವಿನ ಮನೆಯಿಂದ ಬಂದ ದುರ್ವಾಸನೆ ಮೇರೆಗೆ ಅನುಮಾನಗೊಂಡು ನೆರೆಹೊರೆಯವರು ಕಾಡುಗೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಘಟನಾ ಸ್ಥಳಕ್ಕೆ ಬಂದ ಪೊಲೀಸರು ಬಾಗಿಲು ತೆಗದು ಒಳಗೆ ಹೋಗಿ ಪರಿಶೀಲಿಸಿದಾಗ ನಾಲ್ವರು ಸಾವನ್ನಪ್ಪಿರುವ ಸ್ಥಿತಿಯಲ್ಲಿ ಮೃತದೇಹಗಳು ಪತ್ತೆಯಾಗಿತ್ತು. ಪತ್ನಿ-ಮಕ್ಕಳನ್ನ ಹತ್ಯೆಗೈದ ಬಳಿಕ ವಿರಾರ್ಜುನಾ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿತ್ತು.
ಇದನ್ನೂ ಓದಿ:ಹೆಂಡತಿ ಮೇಲಿನ ಕೋಪಕ್ಕೆ ಮಗಳನ್ನೇ ಹತ್ಯೆಗೈದ ತಂದೆ!