ಬೆಂಗಳೂರು: ನಗರದ ಇನ್‌ಫ್ಯಾಂಟ್ರಿ ರಸ್ತೆಯಲ್ಲಿರುವ ಸಂಚಾರ ನಿರ್ವಹಣಾ ಕೇಂದ್ರದಲ್ಲಿ ಕಳ್ಳರು ಕೈಚಳಕ ತೋರಿದ್ದಾರೆ. ಫೆಬ್ರವರಿ 21ರ ತಡರಾತ್ರಿ ಈ ಘಟನೆ ನಡೆದಿದೆ.
ಸಂಚಾರ ನಿರ್ವಹಣಾ ಕೇಂದ್ರ ಹಾಗೂ ಸಂಚಾರ ವಿಭಾಗದ ಜಂಟಿ ಆಯುಕ್ತರ ಕಚೇರಿ ಇರುವ ಕಟ್ಟಡದ ನೆಲಮಹಡಿಯಲ್ಲಿರುವ ಜನರೇಟರ್ಗೆ ಅಳವಡಿಸಲಾಗಿದ್ದ 2 ಬ್ಯಾಟರಿಗಳನ್ನ ಕಳ್ಳರು ಕದ್ದೊಯ್ದಿದ್ದಾರೆ. ಕಳವಾದ ಬ್ಯಾಟರಿಗಳ ಮೌಲ್ಯ ಸುಮಾರು 20 ಸಾವಿರ ರೂ.ಎಂದು ಅಂದಾಜಿಸಲಾಗಿದೆ. ಈ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.