ಬೆಂಗಳೂರು:ನಗರದ ಚಂದ್ರಾ ಲೇಔಟ್ ಪೊಲೀಸರು ಕಾರ್ಯಾಚರಣೆ ನಡೆಸಿ ಮೊಬೈಲ್ ಹಾಗೂ ಬೈಕ್ ಕಳ್ಳತನ ಮಾಡಿದ್ದ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಶ್ರೀಶೈಲ, ಹನುಮಂತ ಮತ್ತು ವೆಂಕಟೇಶ್ ಬಂಧಿತ ಆರೋಪಿಗಳಾಗಿದ್ದು, ನಾಗರಾಭಾವಿ ಠಾಣಾ ವ್ಯಾಪ್ತಿಯಲ್ಲಿ ಮೊಬೈಲ್ ಕಳ್ಳತನ ಮಾಡಿದ್ದರು. ಈ ಸಂಬಂಧ ಚಂದ್ರಾ ಲೇಔಟ್ ಠಾಣೆಯಲ್ಲಿ ಕೂಡ ಪ್ರಕರಣ ದಾಖಲಾಗಿತ್ತು. ಠಾಣಾ ಇನ್ಸ್ಪೆಕ್ಟರ್ ಬಿಜ್ರೇಸ್ ನೇತೃತ್ವದಲ್ಲಿ ಮೂವರು ಖದೀಮರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಬಂಧಿತರಿಂದ ದ್ವಿಚಕ್ರ ವಾಹನಗಳು, 5 ಮೊಬೈಲ್ ಸೇರಿದಂತೆ ಕೃತ್ಯಕ್ಕೆ ಬಳಸಿದ್ದ ಹೋಂಡಾ ಆ್ಯಕ್ಟಿವಾ ಸ್ಕೂಟರನ್ನು ವಶಕ್ಕೆ ಪಡೆಯಲಾಗಿದೆ.