ಬೆಂಗಳೂರು : ಕೇಂದ್ರ ಸರ್ಕಾರ ಫೆಬ್ರವರಿ 1ಕ್ಕೆ(ಬುಧವಾರ) ಬಜೆಟ್ ಮಂಡನೆ ಮಾಡಲಿದೆ. ಚುನಾವಣಾ ಹೊಸ್ತಿಲಲ್ಲಿ ಇರುವ ಬಸವರಾಜ ಬೊಮ್ಮಾಯಿ ಸರ್ಕಾರವು ಕೇಂದ್ರ ಬಜೆಟ್ ಮೇಲೆ ಹೆಚ್ಚಿನ ನಿರೀಕ್ಷೆಗಳನ್ನು ಇಟ್ಟುಕೊಂಡಿದೆ. ಇತ್ತ ರಾಜ್ಯಕ್ಕೂ ಇದು ಚುನಾವಣೆ ವರ್ಷ ಆಗಿರುವುದರಿಂದ ಕೇಂದ್ರ ಬಜೆಟ್ ಕರ್ನಾಟಕಕ್ಕೆ ಹೆಚ್ಚಿನ ಕೊಡುಗೆ ನೀಡಲಿದೆ ಎಂಬ ವಿಶ್ವಾಸವನ್ನು ಬಸವರಾಜ ಬೊಮ್ಮಾಯಿ ಸರ್ಕಾರ ಹೊಂದಿದೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1ಕ್ಕೆ ಸಂಸತ್ನಲ್ಲಿ ಕೇಂದ್ರ ಬಜೆಟ್ ಮಂಡನೆ ಮಾಡಲಿದ್ದಾರೆ. ದೇಶದ ಜನರಿಗೆ, ಮಧ್ಯಮ ವರ್ಗ, ದುಡಿಯುವ ವರ್ಗ, ಕೇಂದ್ರ ಬಜೆಟ್ ಮೇಲೆ ಹೆಚ್ಚಿನ ನಿರೀಕ್ಷೆಗಳನ್ನು ಇಟ್ಟಿದೆ. ಇತ್ತ ಕರ್ನಾಟಕದ ಜನರೂ ಕೇಂದ್ರದ ಬಜೆಟ್ ಮೇಲೆ ಹೆಚ್ಚು ನಿರೀಕ್ಷೆ ಇದೆ. ಅದರಲ್ಲೂ ರಾಜ್ಯ ಚುನಾವಣೆ ಹೊಸ್ತಿಲಲ್ಲಿ ಇರುವುದರಿಂದ ಕೇಂದ್ರ ಬಜೆಟ್ನಲ್ಲಿ ಕರ್ನಾಟಕಕ್ಕೆ ಹೆಚ್ಚಿನ ಅನುದಾನ ಸಿಗುವ ಸಾಧ್ಯತೆ ಇದೆ. ಬೊಮ್ಮಾಯಿ ಸರ್ಕಾರವು ಕೇಂದ್ರ ಬಜೆಟ್ನಿಂದ ಕರ್ನಾಟಕಕ್ಕೆ ಹೆಚ್ಚಿನ ಕೊಡುಗೆ ನೀಡುವ ವಿಶ್ವಾಸದಲ್ಲಿದೆ.
ಈಗಾಗಲೇ ರಾಜ್ಯ ಸರ್ಕಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ಗೆ ಕರ್ನಾಟಕದ ಬಜೆಟ್ ವಿಶ್ ಲಿಸ್ಟ್ಅನ್ನು ಸಲ್ಲಿಸಿದೆ. ರಾಜ್ಯದ ಬೇಡಿಕೆಗಳ ಪಟ್ಟಿಯನ್ನು ಕೇಂದ್ರ ಹಣಕಾಸು ಸಚಿವೆಗೆ ಸಲ್ಲಿಸಲಾಗಿದೆ. ಚುನಾವಣೆ ಹಿನ್ನೆಲೆ ಕೇಂದ್ರ ಸರ್ಕಾರ ಬಜೆಟ್ನಲ್ಲಿ ರಾಜ್ಯದ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಲಿದೆ ಎಂದು ಹೇಳಲಾಗಿದೆ. ಆ ಮೂಲಕ ಡಬಲ್ ಇಂಜಿನ್ ಸರ್ಕಾರಕ್ಕೆ ಹೆಚ್ಚಿನ ಶಕ್ತಿ ತುಂಬಿಸುವ ಇರಾದೆ ಕೇಂದ್ರ ಸರ್ಕಾರದ್ದಾಗಿದೆ.
ರಾಜ್ಯ ಸರ್ಕಾರದ ಬಜೆಟ್ ಬೇಡಿಕೆಗಳೇನು? :ರಾಜ್ಯ ಸರ್ಕಾರ ಈ ಬಾರಿಯ ಕೇಂದ್ರ ಬಜೆಟ್ ಮೇಲೆ ಹೆಚ್ಚಿನ ನಿರೀಕ್ಷೆಗಳನ್ನು ಇಟ್ಟಿದೆ. ಸಿಎಂ ಬಸವರಾಜ ಬೊಮ್ಮಾಯಿ ಫೆಬ್ರವರಿ 17ಕ್ಕೆ ರಾಜ್ಯ ಬಜೆಟ್ ಮಂಡನೆ ಮಾಡಲಿದ್ದು, ಕೇಂದ್ರದ ಬಜೆಟ್ ಮೇಲೆ ಹೆಚ್ಚಿನ ನಿರೀಕ್ಷೆ ಇಟ್ಟಿದೆ. ರಾಜ್ಯಕ್ಕೆ ಈ ಬಾರಿ ಕೇಂದ್ರ ಬಜೆಟ್ನಲ್ಲಿ ಹೆಚ್ಚಿನ ಕೊಡುಗೆ ಬರುವ ವಿಶ್ವಾಸ ಹೊಂದಿದೆ. ಆ ಹಿನ್ನೆಲೆ ರಾಜ್ಯ ಸರ್ಕಾರ ಕೇಂದ್ರ ಹಣಕಾಸು ಸಚಿವರಿಗೆ ಬೇಡಿಕೆಗಳ ಪಟ್ಟಿಯನ್ನು ಸಲ್ಲಿಸಿದೆ.
15ನೇ ಹಣಕಾಸು ಆಯೋಗದ ಶಿಫಾರಸ್ಸಿನಂತೆ ರಾಜ್ಯಕ್ಕೆ ಬರಬೇಕಾದ 5,000 ಕೋಟಿ ರೂ. ಹಣವನ್ನು ಬಿಡುಗಡೆ ಮಾಡಲು ರಾಜ್ಯ ಸರ್ಕಾರ ಮನವಿ ಮಾಡಿದೆ. ಆ ಮೂಲಕ ರಾಜ್ಯಕ್ಕೆ ಹೆಚ್ಚಿನ ಅನುದಾನ ಲಭ್ಯವಾಗಲಿದ್ದು, ಹೆಚ್ಚಿನ ಅಭಿವೃದ್ಧಿ ಕಾರ್ಯ ಸಾಧ್ಯವಾಗಲಿದೆ ಎಂಬುದು ರಾಜ್ಯ ಸರ್ಕಾರದ ಬೇಡಿಕೆ.