ಬೆಂಗಳೂರು:ಈ ಬಾರಿಯ ಸಂಪುಟದಲ್ಲಿ ಡಿಸಿಎಂ ಹುದ್ದೆ ಇರುವುದಿಲ್ಲ, 29 ಮಂದಿ ಸಚಿವರಿರುತ್ತಾರೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
ಸಂಪುಟ ರಚನೆ ಕುರಿತು ವಿಧಾನಸೌಧದಲ್ಲಿ ಮಾತನಾಡಿದ ಸಿಎಂ, ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಕೂಡಲೇ ಪಿಂಚಣಿ ಹೆಚ್ಚಳ ಮಾಡಿದೆ. ಅದಾದ ಬಳಿಕ ಉತ್ತರ ಕನ್ನಡದ ಪ್ರವಾಹ ಪರಿಸ್ಥಿತಿ ಅವಲೋಕಿಸಲು ಪ್ರವಾಸ ಮಾಡಿದ್ದೆ. ಬಳಿಕ ಸಚಿವ ಸಂಪುಟ ರಚನೆಗಾಗಿ ಹೈಕಮಾಂಡ್ ಭೇಟಿಗೆ ಹೋಗಿದ್ದೆ. ಅನುಭವಿ ಹಾಗೂ ಹೊಸ ಮುಖಗಳಿಗೆ ಅವಕಾಶ ನೀಡಲಾಗಿದೆ. ಜೊತೆಗೆ ಹಿರಿಯರಿಗೆ ಪಕ್ಷ ಸಂಘಟನೆ ಹೊಣೆಗಾರಿಕೆ ನೀಡಲು ನಿರ್ಧರಿಸಲಾಗಿದೆ. ಈಗಾಗಲೇ ರಾಜ್ಯಪಾಲರಿಗೆ ಪಟ್ಟಿ ಕಳುಹಿಸಲಾಗಿದೆ ಎಂದಿದ್ದಾರೆ.