ಬೆಂಗಳೂರು: ಸಚಿವ ಸ್ಥಾನ ಹಂಚಿಕೆಯಲ್ಲಿ ನನಗೆ ಯಾವುದೇ ರೀತಿಯ ಅತೃಪ್ತಿ ಇಲ್ಲ. ರಾಷ್ಟ್ರೀಯ ಹಾಗೂ ರಾಜ್ಯ ನಾಯಕರ ತೀರ್ಮಾನಗಳಿಗೆ ನಾವು ಬದ್ಧರಾಗಿದ್ದೇವೆ ಎಂದು ಬಿಜೆಪಿ ಶಾಸಕ ತಿಪ್ಪಾರೆಡ್ಡಿ ಸ್ಪಷ್ಟಪಡಿಸಿದ್ದಾರೆ.
ಸಚಿವ ಸ್ಥಾನ ಹಂಚಿಕೆ: ಯಾವುದೇ ರೀತಿಯ ಅಸಮಾಧಾನ ಇಲ್ಲವೆಂದ ಶಾಸಕ
ರಾಜ್ಯ ಸಚಿವ ಸ್ಥಾನ ಹಂಚಿಕೆ ಬಗ್ಗೆ ನನಗೆ ಯಾವುದೇ ಅಸಮಾಧಾನವಿಲ್ಲ. ರಾಷ್ಟ್ರ, ರಾಜ್ಯ ನಾಯಕರ ತೀರ್ಮಾನಕ್ಕೆ ಬದ್ಧವಾಗಿದ್ದೇನೆ ಎಂದು ಶಾಸಕ ತಿಪ್ಪಾರೆಡ್ಡಿ ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಿಎಂ ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ರಾಜ್ಯದಲ್ಲಿ ಸಂಭವಿಸಿದ ನೆರೆ ಹಾವಳಿ ಬಗ್ಗೆ ಸೂಕ್ತ ಪರಿಹಾರ ಕಾರ್ಯ ಕೈಗೊಳ್ಳಲಾಗಿದೆ ಎಂದರು.
ಶಾಸಕರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಪಕ್ಷ ನಿರ್ಧಾರ ಮಾಡುತ್ತದೆ. ಸ್ಥಾನಮಾನ ನೀಡಲಿ, ಬಿಡಲಿ ನಾವು ಕೆಲಸ ಮಾಡುತ್ತೇವೆ. ದೇಶವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವಂತೆ ಮಾಡಿರುವ ಪ್ರಧಾನಿ ಮೋದಿ, ಗೃಹ ಸಚಿವ ಶಾ ಅವರ ಯೋಜನೆಗಳಂತೆ ಎಲ್ಲ ನಾಯಕರು, ಕಾರ್ಯಕರ್ತರು ನಡೆದುಕೊಳ್ಳುತ್ತಿದ್ದೇವೆ ಎಂದು ಶಾಸಕ ತಿಪ್ಪಾರೆಡ್ಡಿ ತಿಳಿಸಿದರು.