ಬೆಂಗಳೂರು:ರಾಜ್ಯದಲ್ಲಿ ಮತ್ತೆ ಲಾಕ್ಡೌನ್ ಮಾಡುವ ಸಂಬಂಧ ಇನ್ನೂ ಎರಡು ದಿನಗಳ ಕಾಲ ಯಾವುದೇ ಸಭೆಗಳನ್ನು ನಡೆಸುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ಅಲ್ಲದೇ ಎಸ್ಎಸ್ಎಲ್ಸಿ ಪರೀಕ್ಷೆ ಮುಗಿಯುತ್ತಿದ್ದಂತೆ ಲಾಕ್ಡೌನ್ ಮಾಡಲಾಗುತ್ತದೆ ಎನ್ನುವ ವದಂತಿಗೆ ತೆರೆ ಎಳೆದಿದ್ದಾರೆ.
ಲಾಕ್ಡೌನ್ಗೆ ಸಂಬಂಧಿಸಿದಂತೆ ಇನ್ನೆರಡು ದಿನ ಯಾವುದೇ ಸಭೆ ನಡೆಯಲ್ಲ: ವದಂತಿಗಳಿಗೆ ಸಿಎಂ ತೆರೆ - Chief Minister BS Yeddiyurappa
ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ಮತ್ತೆ ಲಾಕ್ಡೌನ್ ಜಾರಿ ಮಾಡಲಾಗುತ್ತಾ ಎನ್ನುವ ಚರ್ಚೆ ನಡೆಯುತ್ತಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಸಿಎಂ ಇನ್ನೂ ಎರಡು ದಿನಗಳ ಕಾಲ ಇದಕ್ಕೆ ಸಂಬಂಧಿಸಿ ಯಾವುದೇ ಸಭೆಗಳನ್ನು ನಡೆಸುವುದಿಲ್ಲ ಎಂದಿದ್ದಾರೆ.
ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ಮತ್ತೆ ಲಾಕ್ಡೌನ್ ಜಾರಿ ಮಾಡಲಾಗುತ್ತಾ ಎನ್ನುವ ಚರ್ಚೆ ನಡೆಯುತ್ತಿದೆ. ಈ ನಡುವೆ ಕೊರೊನಾ ನಿಯಂತ್ರಣಕ್ಕೆ ಲಾಕ್ಡೌನ್ ಒಂದೇ ಪರಿಹಾರ ಎಂದು ತಜ್ಞರ ಸಮಿತಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೂ ಸಲಹೆ ನೀಡಿತ್ತು. ತಜ್ಞರ ಸಮಿತಿಯ ಸಲಹೆಯಂತೆ ಲಾಕ್ಡೌನ್ ಜಾರಿ ಸಂಬಂಧ ಸಿಎಂ ಸಭೆ ನಡೆಸಲಿದ್ದಾರೆ ಎನ್ನುವ ಸುದ್ದಿ ಹರಡಿತ್ತು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿನ್ನೆ ಮತ್ತು ಇಂದು ಲಾಕ್ಡೌನ್ ಬಗ್ಗೆ ಯಾವುದೇ ಚರ್ಚೆ ಹಾಗೂ ಸಭೆ ನಡೆಸಿಲ್ಲ. ಇಂದು ಸಂಜೆ ಅಥವಾ ರಾತ್ರಿಯೂ ಯಾವುದೇ ಸಭೆ ನಿಗದಿಯಾಗಿಲ್ಲ ಎಂದು ಸ್ಪಷ್ಟೀಕರಣ ನೀಡಿದ್ದಾರೆ. ಇಂದು ಮಾತ್ರವಲ್ಲ ನಾಳೆ ಮತ್ತು ನಾಡಿದ್ದು ಎರಡು ದಿನ ಕೂಡ ಲಾಕ್ಡೌನ್ ಜಾರಿಗೆ ಸಂಬಂಧಿಸಿದಂತೆ ಯಾವುದೇ ಸಭೆಗಳು ಇರುವುದಿಲ್ಲ ಎಂದು ಹೇಳಿದ್ದಾರೆ.