ಕರ್ನಾಟಕ

karnataka

ETV Bharat / state

7ನೇ ವೇತನ ಆಯೋಗದ ಶಿಫಾರಸು ಜಾರಿ ಕುರಿತು ಬಜೆಟ್‌ನಲ್ಲಿ ಪ್ರಸ್ತಾಪವಿಲ್ಲ: ಬಂಡೆಪ್ಪ ಕಾಶೆಂಪೂರ್ - ಈಟಿವಿ ಭಾರತ ಕನ್ನಡ

ಸರ್ಕಾರಿ ನೌಕರರ ಏಳನೇ ಆಯೋಗದ ಶಿಫಾರಸು ಜಾರಿ ಕುರಿತು ಬಜೆಟ್​ನಲ್ಲಿ ಯಾವುದೇ ಪ್ರಸ್ತಾಪ ಇಲ್ಲ. ಇದರಿಂದ ಸರ್ಕಾರಿ ನೌಕರರಿಗೆ ಅನ್ಯಾಯ ಮಾಡಲಾಗಿದೆ ಎಂದು ಕಾಶೆಂಪೂರ್ ಹೇಳಿದರು.

there-is-no-proposal-in-the-budget-of-seventh-pay-commission-says-bandeppa-kashempur
ನೌಕರರಿಗೆ ಏಳನೇ ವೇತನ ಆಯೋಗದ ಶಿಫಾರಸ್ಸುಗಳ ಜಾರಿ ಕುರಿತು ಬಜೆಟ್ ನಲ್ಲಿ ಪ್ರಸ್ತಾಪವಿಲ್ಲ : ಬಂಡೆಪ್ಪ ಕಾಶೆಂಪೂರ್

By

Published : Feb 22, 2023, 6:18 PM IST

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಏಳನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೆ ತರುವ ವಿಚಾರ ಬಜೆಟ್​ನಲ್ಲಿ ಪ್ರಸ್ತಾಪವಾಗಿಲ್ಲ. ಮುಖ್ಯಮಂತ್ರಿಗಳು ಉತ್ತರ ನೀಡುವ ಸಂದರ್ಭದಲ್ಲಿ ಈ ಕುರಿತು ಸ್ಪಷ್ಟವಾದ ನಿರ್ಧಾರವನ್ನು ಪ್ರಕಟಿಸಬೇಕು ಎಂದು ಜೆಡಿಎಸ್‍ ಶಾಸಕಾಂಗ ಪಕ್ಷದ ಉಪನಾಯಕ ಬಂಡೆಪ್ಪ ಕಾಶೆಂಪೂರ್ ವಿಧಾನಸಭೆಯಲ್ಲಿ ಆಗ್ರಹಿಸಿದರು.

ಇಂದು ಬಜೆಟ್‍ ಮೇಲೆ ಮುಂದುವರೆದ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬೇರೆ ರಾಜ್ಯಗಳಲ್ಲಿ ಈಗಾಗಲೇ ಏಳನೇ ವೇತನ ಆಯೋಗದ ಶಿಫಾರಸಿನ ಸೌಲಭ್ಯ‍ಗಳನ್ನು ನೀಡಿ ಅನುಕೂಲ ಮಾಡಿಕೊಡಲಾಗಿದೆ. ಆದರೆ, ಬಜೆಟ್​​ನಲ್ಲಿ ಈ ವಿಚಾರ ಪ್ರಸ್ತಾಪಿಸದೇ ಸರ್ಕಾರಿ ನೌಕರರಿಗೆ ಅನ್ಯಾಯ ಮಾಡಲಾಗಿದೆ ಎಂದು ಆರೋಪಿಸಿದರು.

ಯುವಕರಿಗೆ ಉದ್ಯೋಗಾವಕಾಶ ಸೃಷ್ಟಿಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸಿಲ್ಲ. ಬಂಡವಾಳ ಹೂಡಿಕೆದಾರರ ಸಮಾವೇಶಗಳನ್ನು ನಡೆಸಿದರೂ ಯುವಕರಿಗೆ ಉದ್ಯೋಗ ದೊರಕುತ್ತಿಲ್ಲ. ಮಹಿಳೆಯರ ಸಬಲೀಕರಣಕ್ಕೆ ಒತ್ತು ನೀಡಿಲ್ಲ. ನಮ್ಮ ನಾಯಕರಾದ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯ ವಿವಿದೆಡೆ 9 ಕ್ಲಷ್ಟರ್ ಗಳನ್ನು ನಿರ್ಮಿಸಿ ಒಂದೊಂದು ಲಕ್ಷ ಉದ್ಯೋಗ ಸೃಷ್ಟಿಗೆ ಕಾರ್ಯಕ್ರಮ ರೂಪಿಸಿದ್ದರು. ಅವುಗಳನ್ನು ಈ ಸರ್ಕಾರ ಕೈ ಬಿಟ್ಟಿಲ್ಲವಾದರೂ ಕ್ಲಷ್ಟರ್ ಗಳ ಅಭಿವೃದ್ಧಿಗೆ ಹೆಚ್ಚಿನ ಹಣಕಾಸು ಒದಗಿಸಿಲ್ಲ ಎಂದು ಟೀಕಿಸಿದರು.

ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ ಆರ್ಥಿಕ ತಜ್ಞ ಡಿ.ಎಂ.ನಂಜುಂಡಪ್ಪ ನೀಡಿರುವ ವರದಿ ಅನ್ವಯ ಹಿಂದುಳಿದ ತಾಲೂಕುಗಳ ಅಭಿವೃದ್ಧಿಗೆ ಸಾಕಷ್ಟು ಹಣ ಒದಗಿಸಿಲ್ಲ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಣ, ಆರೋಗ್ಯ, ರಸ್ತೆಗಳ ಅಭಿವೃದ್ಧಿಗೆ ಬಜೆಟ್ ನಲ್ಲಿ ಹೆಚ್ಚಿನ ಹಣ ಒದಗಿಸಿಲ್ಲ ಎಂದು ಆರೋಪಿಸಿದರು.

ಇದನ್ನೂ ಓದಿ :ನಾನು ಚುನಾವಣೆಗೆ ನಿಲ್ಲೋದಿಲ್ಲ, ಮತ್ತೆ ಸದನಕ್ಕೆ ಬರೋದಿಲ್ಲ: ಭಾವುಕರಾಗಿ ನುಡಿದ ಬಿಎಸ್​ವೈ

ABOUT THE AUTHOR

...view details