ಕರ್ನಾಟಕ

karnataka

ETV Bharat / state

ಬಿಜೆಪಿ ಬಿಟ್ಟು ಹೋಗುವ ಪ್ರಶ್ನೆಯೇ ಉದ್ಭವಿಸುವುದಿಲ್ಲ: ಸಚಿವ ಗೋಪಾಲಯ್ಯ - ಬಸವರಾಜ ಬೊಮ್ಮಾಯಿ ನಾಯಕತ್ವದಲ್ಲೇ ಚುನಾವಣೆ

ಬಿಜೆಪಿ ನನಗೆ ಶಾಸಕ, ಸಚಿವ ಸ್ಥಾನ ಎಲ್ಲವನ್ನೂ ಕೊಟ್ಟಿದೆ. ಹೀಗಿರುವಾಗ ನಾವು ಯಾಕೆ ಬಿಜೆಪಿ ಬಿಡಬೇಕು. ಬಿಜೆಪಿ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿದೆ. ನಾವೆಲ್ಲ 17 ಮಂದಿ ಒಗ್ಗಟ್ಟಾಗಿಯೇ ಇದ್ದೇವೆ ಎಂದು ಸಚಿವ ಕೆ‌.ಗೋಪಾಲಯ್ಯ ಸ್ಪಷ್ಟಪಡಿಸಿದರು.

ಸಚಿವ ಗೋಪಾಲಯ್ಯ
ಸಚಿವ ಗೋಪಾಲಯ್ಯ

By

Published : Jan 27, 2022, 1:03 PM IST

ಬೆಂಗಳೂರು: ಬಿಜೆಪಿ ಬಿಟ್ಟು ಹೋಗುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಪಕ್ಷ ನಮಗೆ ಎಲ್ಲವನ್ನೂ ಕೊಟ್ಟಿದೆ ಎಂದು ಸಚಿವ ಕೆ‌.ಗೋಪಾಲಯ್ಯ ತಿಳಿಸಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು, ಬಿಜೆಪಿ ನನಗೆ ಶಾಸಕ, ಸಚಿವ ಸ್ಥಾನ ಎಲ್ಲವನ್ನೂ ಕೊಟ್ಟಿದೆ. ಹೀಗಿರುವಾಗ ನಾವು ಯಾಕೆ ಬಿಜೆಪಿ ಬಿಡಬೇಕು. ಸಿಎಂ ಬಸವರಾಜ ಬೊಮ್ಮಾಯಿ ನಾಯಕತ್ವದಲ್ಲೇ ಚುನಾವಣೆ ಎದುರಿಸುತ್ತೇವೆ. ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿದೆ. ನಾವೆಲ್ಲಾ 17 ಮಂದಿ ಒಗ್ಗಟ್ಟಾಗಿಯೇ ಇದ್ದೇವೆ ಎಂದು ಸ್ಪಷ್ಟಪಡಿಸಿದರು.

ವಿಧಾನಸೌಧದಲ್ಲಿ ಮಾತನಾಡಿದ ಸಚಿವ ಗೋಪಾಲಯ್ಯ

ಈ ಬಗ್ಗೆ ಯಾರು ಸುಳ್ಳು ವದಂತಿ‌ ಹಬ್ಬಿಸುತ್ತಿದ್ದರೋ ಅವರನ್ನು ಕೇಳಿ. ಯಡಿಯೂರಪ್ಪ ಮಾತಿನಂತೆ ನಡೆದುಕೊಂಡ್ರು. ಸೋತರೂ ಎಂಎಲ್​ಸಿ ಮಾಡಿ ಸ್ಥಾನಮಾನ ಕೊಟ್ಟಿದ್ದಾರೆ. ಬಿಜೆಪಿ ಒಂದು ರಾಷ್ಟ್ರೀಯ ಪಕ್ಷ, ಕೊರೊನಾ ಮಧ್ಯೆಯೂ ನಾವೆಲ್ಲ ಕೆಲಸ ಮಾಡ್ತಿದ್ದೇವೆ. ಬೇರೆ ಪಕ್ಷಕ್ಕೆ ಹೋಗುವ ಸಂದರ್ಭ ಬರುವುದಿಲ್ಲ. ನಾವ್ಯಾರು ಅರ್ಜಿ ಹಾಕಿಲ್ಲ, ಬರುತ್ತೇವೆ ಅಂತ. ಬೊಮ್ಮಾಯಿ ನೇತೃತ್ವದಲ್ಲೇ ಅಧಿಕಾರಕ್ಕೆ‌ ಬರುತ್ತೇವೆ. ನಮ್ಮಲ್ಲಿ‌ ಹೋಗುವವರು ಯಾರು ಇಲ್ಲ. ಬೇರೆ ಪಕ್ಷದಿಂದ ಬರುವವರ ಬಗ್ಗೆ ಗೊತ್ತಿಲ್ಲ ಎಂದರು.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ABOUT THE AUTHOR

...view details