ಕರ್ನಾಟಕ

karnataka

ETV Bharat / state

ತಾರಾ ಪ್ರಚಾರಕರ ಸಿನಿಮಾ ಪ್ರದರ್ಶನಕ್ಕಿಲ್ಲ ನಿರ್ಬಂಧ: ಚುನಾವಣಾಧಿಕಾರಿ - ಮಾಧ್ಯಮ ಕಾರ್ಯಾಗಾರ

ತಾರಾ ಪ್ರಚಾರಕರ ಸಿನಿಮಾ ಪ್ರದರ್ಶನಕ್ಕೆ ನಿರ್ಬಂಧ ಇಲ್ಲ ಎಂದು ಅಪರ ಮುಖ್ಯ ಚುನಾವಣಾಧಿಕಾರಿ ವೆಂಕಟೇಶ್ ಕುಮಾರ್ ತಿಳಿಸಿದ್ದಾರೆ.

Venkatesh Kumar
ಬೆಂಗಳೂರಿನಲ್ಲಿ ಅಪರ ಮುಖ್ಯ ಚುನಾವಣಾಧಿಕಾರಿ ವೆಂಕಟೇಶ್ ಕುಮಾರ್ ಮಾತನಾಡಿದರು.

By

Published : Apr 6, 2023, 9:26 PM IST

ಬೆಂಗಳೂರು:''ತಾರಾ ಪ್ರಚಾರಕರ ಸಿನಿಮಾ ಪ್ರದರ್ಶನಕ್ಕೆ ನಿರ್ಬಂಧವಿಲ್ಲ. ಆದರೆ, ರಾಜಕೀಯ ವಿಚಾರಗಳು ಒಳಗೊಂಡಿರುವ ಬಗ್ಗೆ ದೂರು ಬಂದರೆ ಕ್ರಮ ಕೈಗೊಳ್ಳಲಾಗುವುದು'' ಎಂದು ಅಪರ ಮುಖ್ಯ ಚುನಾವಣಾಧಿಕಾರಿ ವೆಂಕಟೇಶ್ ಕುಮಾರ್ ಹೇಳಿದ್ದಾರೆ.

ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಮತ್ತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ವಾರ್ತಾ ಭವನದಲ್ಲಿ ಗುರುವಾರ ಏರ್ಪಡಿಸಿದ್ದ ಮಾಧ್ಯಮ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ''ತಾರಾ ಪ್ರಚಾರಕರ ಸಿನಿಮಾ ಪ್ರದರ್ಶನಕ್ಕೆ ನಿರ್ಬಂಧವಿಲ್ಲ. ಆದರೆ, ಸಿನಿಮಾದಲ್ಲಿ ರಾಜಕೀಯ ವಿಚಾರಗಳಿಗೆ ಸಂಬಂಧಿಸಿದಂತೆ ದೂರುಗಳು ಬಂದರೆ, ಕ್ರಮ ಕೈಗೊಳ್ಳಲಾಗುವುದು. ರಾಜಕೀಯ ಪಕ್ಷಗಳು ನೀಡುವ ಜಾಹೀರಾತಿನಲ್ಲಿ ವೈಯಕ್ತಿಕ ನಿಂದನೆ, ಜಾತಿ, ಧರ್ಮ ಸೂಚಿಸುವ ಉಲ್ಲೇಖ ಇರಬಾರದು. ಇ-ಪತ್ರಿಕೆಯಲ್ಲಿ ಜಾಹೀರಾತು ಪ್ರಕಟಿಸಲು ಪೂರ್ವಾನುಮತಿ ಪಡೆದಿರಬೇಕು'' ಎಂದರು‌.

''ಮತಯಂತ್ರಗಳನ್ನು ಪಾರದರ್ಶಕವಾಗಿ ಬಳಸಲಾಗುವುದು. ಈ ಸಂಬಂಧ ಪ್ರತಿ ಹಂತದಲ್ಲೂ ರಾಜಕೀಯ ಪಕ್ಷಗಳಿಗೆ ಮಾಹಿತಿ ನೀಡಲಾಗುತ್ತದೆ. ಮತದಾನ ಆರಂಭವಾಗುವುದಕ್ಕೂ ಮುನ್ನ ಮತ ಕೇಂದ್ರಗಳಲ್ಲಿ ಅಭ್ಯರ್ಥಿಗಳು, ಏಜೆಂಟರ ಸಮ್ಮುಖದಲ್ಲಿ ಅಣಕು ಮತದಾನ ನಡೆಸಲಾಗುವುದು. ಯಾವುದಾದರೂ ಇವಿಎಂಗಳು ಕೈಕೊಟ್ಟರೆ, ಬದಲಿ ಇವಿಎಂಗಳ ವ್ಯವಸ್ಥೆ ಮಾಡಲಾಗುವುದು'' ಎಂದು ಸ್ಪಷ್ಟಪಡಿಸಿದರು.

ಸಾಮಾಜಿಕ‌ ಜಾಲತಾಣದ ಮೇಲೆ ನಿಗಾ:ಚುನಾವಣೆ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳ ಮೇಲೆ ಚುನಾವಣಾ ಆಯೋಗ ನಿಗಾ ಇಟ್ಟಿದೆ ಎಂದು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿಯ ಮಾಧ್ಯಮ ವಿಭಾಗದ ವಿಶೇಷ ಅಧಿಕಾರಿ ಎ.ವಿ.ಸೂರ್ಯಸೇನ್ ತಿಳಿಸಿದರು. ನೀತಿ ಸಂಹಿತೆ ಸಾಮಾಜಿಕ ಮಾಧ್ಯಮಗಳಿಗೂ ಅನ್ವಯವಾಗಲಿವೆ. ನೀತಿ ಸಂಹಿತೆ ಉಲ್ಲಂಘಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಹೀಗಾಗಿ ಫೇಸ್‌ಬುಕ್, ಇನ್‌ಸ್ಟಾಗ್ರಾಂ, ಟ್ವಿಟ್ಟರ್ ಮೇಲೂ ನಿಗಾ ಇಡಲಾಗುವುದು. ವಾಟ್ಸ್​ಆ್ಯಪ್ ವೈಯಕ್ತಿಕ ಅಪ್ಲಿಕೇಷನ್ ಆಗಿದೆ‌. ಅದು ಸಾಮಾಜಿಕ ಮಾಧ್ಯಮ ಎಂಬ ಬಗ್ಗೆ ಒಂದಷ್ಟು ಗೊಂದಲವಿದೆ. ಆದರೆ, ವಾಟ್ಸ್​ಆ್ಯಪ್​ ಗ್ರೂಪ್ ಅಡ್ಮಿನ್‌ಗಳ ಬಗ್ಗೆ ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ ಒಂದಷ್ಟು ಸ್ಪಷ್ಟತೆ ಇದೆ. ಇದರ ಆಧಾರದಲ್ಲಿ ಕ್ರಮ ಕೈಗೊಳ್ಳಲಾಗುವುದು'' ಎಂದು ಅವರು ತಿಳಿಸಿದರು.

ಜಾಹೀರಾತು ಫಲಕ, ಹೋರ್ಡಿಂಗ್ಸ್ ನಿಷೇಧ:ನೀತಿ ಸಂಹಿತೆ ಜಾರಿಯಾಗಿದ್ದು ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಜಾಹೀರಾತು ಫಲಕ, ಫ್ಲೆಕ್ಸ್, ಭಿತ್ತಿಪತ್ರ, ಹೋರ್ಡಿಂಗ್ಸ್, ಬಂಟಿಂಗ್ಸ್, ಕಟೌಟ್, ಗೋಡೆಬರಹಗಳಿಗೆ ನಿಷೇಧ ಮಾಡಲಾಗಿದೆ. ಚುನಾವಣಾ ಆಯೋಗದ ನಿರ್ದೇಶನದಂತೆ ಮತ್ತು The Karnataka Open Places Act-1981 ಹಾಗೂ ಕರ್ನಾಟಕ ಪೌರ ನಿಗಮಗಳ ಕಾಯ್ದೆ 1976 ಪ್ರಕರಣ 135ರ ಅನ್ವಯ, ಮೈಸೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಚುನಾವಣೆ, ಇನ್ನಿತರೆ ಜಾಹೀರಾತು ಫಲಕ, ಹೋರ್ಡಿಂಗ್ಸ್, ಕಟೌಟ್, ಬಂಟಿಂಗ್ಸ್, ಫ್ಲೆಕ್ಸ್, ಬ್ಯಾನರ್, ಭಿತ್ರಿಪತ್ರ, ಗೋಡೆಬರಹ ಇವುಗಳನ್ನು ಅಳವಡಿಸುವುದು ಮತ್ತು ಅಂಟಿಸುವುದನ್ನು ನಿಷೇಧಿಸಲಾಗಿದೆ ಎಂದು ಮೈಸೂರು ಮಹಾನಗರ ಪಾಲಿಕೆ ಆದೇಶಿಸಿದೆ.

ಇದನ್ನೂ ಓದಿ:32 ಶಾಸಕರ ವಿರುದ್ಧ ಜನತಾ ಪ್ರಾತಿನಿಧ್ಯ ಕಾಯ್ದೆಯಡಿ ಮೊಕದ್ದಮೆ: ಎಡಿಆರ್ ವರದಿ

ABOUT THE AUTHOR

...view details