ಬೆಂಗಳೂರು:ಕಾಂಗ್ರೆಸ್ ಆರೋಪಗಳಲ್ಲಿ ಧಮ್ ಇಲ್ಲ. ಕಾಂಗ್ರೆಸ್ನವರು ವಿವಾದ ಇಲ್ಲದಿದ್ದರೂ ವಿವಾದ ಸೃಷ್ಟಿಸುತ್ತಿದ್ದಾರೆ ಎಂದು ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ತಿರುಗೇಟು ನೀಡಿದ್ದಾರೆ.
ಬೆಂಗಳೂರಿನ ಕೆ.ಕೆ. ಅತಿಥಿ ಗೃಹದಲ್ಲಿ ಮಾತನಾಡಿದ ಅವರು, ಬಿಜೆಪಿಯಲ್ಲಿ ರೌಡಿ ರಾಜಕಾರಣ ವಿಚಾರವಾಗಿ ಪ್ರತಿಕ್ರಿಯಿಸಿ, ಈಗಾಗಲೇ ಪಕ್ಷದ ರಾಜ್ಯಾಧ್ಯಕ್ಷರು ಇದರ ಬಗ್ಗೆ ಸ್ಪಷ್ಟಪಡಿಸಿದ್ಧಾರೆ. ನಮ್ಮ ಪಕ್ಷಕ್ಕೆ ಯಾವುದೇ ರೌಡಿಶೀಟರ್ ಸೇರ್ಪಡೆ ಮಾಡಿಕೊಳ್ಳುತ್ತಿಲ್ಲ. ಫೈಟರ್ ರವಿ ಸೇರ್ಪಡೆ ಬಗ್ಗೆ ರಾಜ್ಯಾಧ್ಯಕ್ಷರೆ ಮಾತನಾಡುತ್ತಾರೆ. ಕಾಂಗ್ರೆಸ್ಗೆ ನಮ್ಮ ವಿರುದ್ಧ ಯಾವುದೇ ಅಜೆಂಡಾ ಸಿಕ್ತಿಲ್ಲ. ರಾಹುಲ್ ಗಾಂಧಿ ಹೋದ ಕಡೆಯೆಲ್ಲ ಕಾಂಗ್ರೆಸ್ ಸೋಲುತ್ತಿದೆ. ಚಾಮರಾಜನಗರಕ್ಕೆ ರಾಹುಲ್ ಬಂದು ಹೋದ ಮೇಲೆ ಅಲ್ಲಿನ ಸ್ಥಳೀಯ ಚುನಾವಣೆಯಲ್ಲಿ ಕಾಂಗ್ರೆಸ್ ಸೋತಿತು ಎಂದು ಟಾಂಗ್ ನೀಡಿದರು.