ಕರ್ನಾಟಕ

karnataka

ETV Bharat / state

ಪರಿಷತ್ ಚುನಾವಣೆಯಲ್ಲಿ ಸೋಲು.. ಬೆಂಗಳೂರು ಗ್ರಾ. ಜಿಲ್ಲಾ ಬಿಜೆಪಿ ಘಟಕದಲ್ಲಿ ಭುಗಿಲೆದ್ದ ಭಿನ್ನಮತ.. - BJP in council elections

ಬೆಂಗಳೂರು ಗ್ರಾಮಾಂತರ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಸ್. ರವಿ 2,262 ಮತಗಳನ್ನು ಪಡೆದು ಗೆಲವು ಸಾಧಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿ ರಮೇಶ್ ಗೌಡ 1,540 ಮತಗಳನ್ನು ಪಡೆದಿದ್ರೆ, ಬಿಜೆಪಿ ಪಕ್ಷದ ಅಭ್ಯರ್ಥಿ ಕೇವಲ 54 ಮತಗಳನ್ನು ಪಡೆದಿದ್ದಾರೆ. ಹೀಗಾಗಿ, ಜಿಲ್ಲಾ ಬಿಜೆಪಿ ಘಟಕದಲ್ಲಿ ಭಿನ್ನಮತ ಎದ್ದಿದೆ ಎಂಬ ಮಾತು ಕೇಳಿ ಬಂದಿವೆ..

there is no unity in Bangalore rural bjp unit
ಬೆಂಗಳೂರು ಗ್ರಾ. ಜಿಲ್ಲಾ ಬಿಜೆಪಿ ಘಟಕದಲ್ಲಿ ಭಿನ್ನಮತ

By

Published : Dec 17, 2021, 12:14 PM IST

ದೊಡ್ಡಬಳ್ಳಾಪುರ (ಬೆಂಗಳೂರು) :ಬೆಂಗಳೂರು ಗ್ರಾಮಾಂತರ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ಸಿ. ನಾರಾಯಣಸ್ವಾಮಿ ಕೇವಲ 54 ಮತ ಗಳಿಸುವ ಮೂಲಕ ಹೀನಾಯ ಸೋಲು ಅನುಭವಿಸಿದ್ದರು. ರಾಷ್ಟ್ರೀಯ ಪಕ್ಷದ ಅಭ್ಯರ್ಥಿಯಾದವರು ಕೇವಲ 54 ಮತಗಳಿಸಿರುವುದು ಜಿಲ್ಲಾ ಬಿಜೆಪಿ ಮುಖಂಡರ ಭಿನ್ನಮತವನ್ನ ಬಯಲು ಮಾಡಿದೆ.

ಬೆಂಗಳೂರು ಗ್ರಾ. ಜಿಲ್ಲಾ ಬಿಜೆಪಿ ಘಟಕದಲ್ಲಿ ಭುಗಿಲೆದ್ದ ಭಿನ್ನಮತ

ಬೆಂಗಳೂರು ಗ್ರಾಮಾಂತರ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಸ್. ರವಿ 2,262 ಮತಗಳನ್ನು ಪಡೆದು ಗೆಲವು ಸಾಧಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿ ರಮೇಶ್ ಗೌಡ 1,540 ಮತಗಳನ್ನು ಪಡೆದಿದ್ರೆ, ಬಿಜೆಪಿ ಪಕ್ಷದ ಅಭ್ಯರ್ಥಿ ಕೇವಲ 54 ಮತಗಳನ್ನು ಪಡೆದಿದ್ದಾರೆ. ಹೀಗಾಗಿ, ಜಿಲ್ಲಾ ಬಿಜೆಪಿ ಘಟಕದಲ್ಲಿ ಭಿನ್ನಮತ ಎದ್ದಿದೆ ಎಂಬ ಮಾತು ಕೇಳಿ ಬಂದಿವೆ.

'ಇದು ನನ್ನ ಸೋಲಲ್ಲ, ಪಕ್ಷದ ಸೋಲು':ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿದ ನಂತರ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಬಿ.ಸಿ. ನಾರಾಯಣಸ್ವಾಮಿ ಅವರು, ಬಿಜೆಪಿ ಮುಖಂಡರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ದೊಡ್ಡಬಳ್ಳಾಪುರ ತಾಲೂಕಿನಲ್ಲೇ ಬಿಜೆಪಿ ಪಕ್ಷದ 168 ಮತಗಳಿವೆ. 8 ವಿಧಾನಸಭಾ ಕ್ಷೇತ್ರಗಳು ಒಳಗೊಂಡತೆ ಕೇವಲ 54 ಮತ ಬಂದಿರುವುದು ನನ್ನ ಸೋಲಲ್ಲ, ಇದು ಪಕ್ಷದ ಸೋಲು ಎಂದರು.

ತಾಲೂಕು ಅಧ್ಯಕ್ಷರಾದ ನಾಗರಾಜು, ನಗರ ಅಧ್ಯಕ್ಷರಾದ ಶಿವಶಂಕರ್, ಜಿಲ್ಲಾ ಉಪಾಧ್ಯಕ್ಷರಾದ ಅಶ್ವತ್ಥ್‌ ನಾರಾಯಣ ಪಕ್ಷದ ಮತಗಳನ್ನು ಕೊಡಿಸುವಲ್ಲಿ ವಿಫಲರಾಗಿದ್ದಾರೆ. ಪಕ್ಷದಲ್ಲಿ ಇಂತಹ ನಾಯಕರು ಇದ್ದರೆ ಪಕ್ಷಕ್ಕೆ ಕೆಡುಕು. ಇವರೆಲ್ಲ ರಾಜೀನಾಮೆ ಕೊಟ್ಟು ಹೋಗಲಿ, ನಿಷ್ಟಾವಂತ ಕಾರ್ಯಕರ್ತರಿಂದ ಪಕ್ಷ ಕಟ್ಟುವುದಾಗಿ ಹೇಳಿದರು.

ಇದನ್ನೂ ಓದಿ:ಅತ್ಯಾಚಾರದ ಕುರಿತ ಹೇಳಿಕೆ.. ಮಹಿಳೆಯರಿಗೆ ನೋವಾಗಿದ್ರೇ ಪ್ರಾಮಾಣಿಕವಾಗಿ ಕ್ಷಮೆ ಕೋರುವೆ.. ರಮೇಶ್​ ಕುಮಾರ್​

ಬಿ.ಸಿ. ನಾರಾಯಣಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಬಿಜೆಪಿ ಮುಖಂಡರು, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಹಣ ಬಲದಿಂದ ನಮ್ಮ ಪಕ್ಷಕ್ಕೆ ಕಡಿಮೆ ಮತ ಬಂದಿದೆ. ಪಕ್ಷದ ಚೌಕಟ್ಟಿನಲ್ಲಿ ಚರ್ಚಿಸಬೇಕಾದ ವಿಷಯವನ್ನು ಪತ್ರಿಕಾಗೋಷ್ಠಿ ನಡೆಸಿ ಹೇಳಿದ್ದು ಪಕ್ಷದ ಹಿನ್ನಡೆಗೆ ಕಾರಣವಾಗಲಿದೆ. ಇದರ ಹಿಂದೆ ಕಾಣದ ಕೈಗಳ ಕೈವಾಡ ಇದೆ ಎಂಬುದು ಬಿಜೆಪಿ ಮುಖಂಡರ ವಾದ.

ನಾರಾಯಣಸ್ವಾಮಿ ಹೇಳಿಕೆಯನ್ನು ಸಾಸಲು ಹೋಬಳಿ ಬಿಜೆಪಿ ಘಟಕದ ಅಧ್ಯಕ್ಷರಾದ ರುದ್ರೇಗೌಡ ಖಂಡಿಸಿದ್ದಾರೆ. ಇಂತಹ ಹೇಳಿಕೆಗಳನ್ನು ಸಹಿಸುವುದಿಲ್ಲವೆಂದು ಹೇಳಿದ್ದಾರೆ.

ABOUT THE AUTHOR

...view details