ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರ ಮನೆಯಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ,ನಗದು ಕಳ್ಳತನ ಮಾಡಿರುವ ಘಟನೆ ಜೆ.ಸಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜಯಮಹಲ್ನ ಮಿಟ್ಟಲ್ ಲಕ್ಷುರಿ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ.
ಉದ್ಯಮಿ ಸಚಿತ್ ಭರತ್ ಎಂಬುವವರ ಮನೆಯಲ್ಲಿ ಕಳ್ಳತನವಾಗಿದ್ದು, ಇವರು ಅಪಾರ್ಟ್ಮೆಂಟ್ನಲ್ಲಿ ವಾಸವಾಗಿದ್ದರು. ಉದ್ಯಮಿ ಸಚಿನ್ ಕುಟುಂಬದವರೊಂದಿಗೆ ಏ.08ರಂದು ವಿದೇಶ ಪ್ರವಾಸಕ್ಕೆ ತೆರಳಿದ್ದರು. ಪ್ರವಾಸ ಮುಗಿಸಿ ಮನೆಗೆ ಬಂದು ನೋಡಿದಾಗ ಮನೆಯಲ್ಲಿ ಕಳ್ಳತನ ನಡೆದಿರುವ ವಿಷಯ ಬಯಲಿಗೆ ಬಂದಿದೆ.