ಬೆಂಗಳೂರು:ನಾಲ್ಕನೇ ಹಂತದ ಕೊರೊನಾ ಲಸಿಕೆ ನೀಡಿಕೆ ಏಪ್ರಿಲ್ ಒಂದರಿಂದ ಆರಂಭಗೊಳ್ಳಲಿದ್ದು, 45 ವರ್ಷ ದಾಟಿದ ನಾಗರಿಕರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕರೆ ನೀಡಿದ್ದಾರೆ.
ಕೊರೊನಾ ಲಸಿಕೆ ಪಡೆಯಲು 45 ವರ್ಷ ಮೇಲ್ಪಟ್ಟವರು ಹೆಸರು ನೋಂದಾಯಿಸಿಕೊಳ್ಳಿ: ಸಿಎಂ ಕರೆ - Chief Minister BS Yeddiyurappa
ಏಪ್ರಿಲ್ 1ರಿಂದ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರಿಗೂ ಕೋವಿಡ್ ಲಸಿಕೆ ನೀಡಲಾಗುವುದು. ಹಾಗಾಗಿ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರು ಲಸಿಕೆ ಪಡೆಯಲು ನೋಂದಣಿ ಮಾಡಿಸಿಕೊಳ್ಳಿ ಎಂದು ಸಿಎಂ ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಸಿಎಂ ಜನರಲ್ಲಿ ಮನವಿ
ಇದೇ ಏಪ್ರಿಲ್ 1ರಿಂದ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರಿಗೂ ಕೋವಿಡ್ ಲಸಿಕೆ ನೀಡುವ ಕೇಂದ್ರ ಸಚಿವ ಸಂಪುಟದ ತೀರ್ಮಾನವನ್ನು ಸ್ವಾಗತಿಸುತ್ತೇನೆ. ಇದರಿಂದ ಕೊರೊನಾ ವಿರುದ್ಧದ ನಮ್ಮ ಹೋರಾಟಕ್ಕೆ ಹೆಚ್ಚಿನ ಶಕ್ತಿ ದೊರಕಿದೆ. 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರು ಲಸಿಕೆ ಪಡೆಯಲು ನೋಂದಣಿ ಮಾಡಿಸಿಕೊಳ್ಳಿ ಎಂದು ಸಿಎಂ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.
ಓದಿ:ಏ.1ರಿಂದ 45 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ : ಪ್ರಕಾಶ್ ಜಾವ್ಡೇಕರ್