ಬೆಂಗಳೂರು: ಯುಗಾದಿ, ಗೌರಿ ಗಣೇಶ, ದೀಪಾವಳಿ ಹಬ್ಬದ ರೀತಿ ಕ್ರಿಸ್‌ಮಸ್ ಹಬ್ಬದ ಪ್ರಯುಕ್ತ ಬೆಂಗಳೂರಿನಿಂದ ರಾಜ್ಯದ ವಿವಿಧ ಭಾಗಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಹೆಚ್ಚುವರಿಯಾಗಿ 1000 ಬಸ್ಗಳ ವ್ಯವಸ್ಥೆ ಮಾಡಲಾಗಿದೆ. ಡಿಸೆಂಬರ್ 22 ಮತ್ತ 23 ವಾರಾಂತ್ಯ ದಿನಗಳು ಹಾಗೂ ಡಿಸೆಂಬರ್ 25 ರಂದು ಕ್ರಿಸ್‌ಮಸ್ ಹಬ್ಬದ ಪ್ರಯುಕ್ತ ಕೆಎಸ್ಆರ್ಟಿಸಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಡಿ.22 ರಿಂದ 24 ರವರೆಗೆ ಬೆಂಗಳೂರಿನಿಂದ ರಾಜ್ಯದ ವಿವಿಧ ಸ್ಥಳಗಳಿಗೆ 1000 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ.
ಎಲ್ಲೆಲ್ಲಿಗೆ ಬಸ್ ವ್ಯವಸ್ಥೆ?:ರಾಜ್ಯ ಮತ್ತು ಅಂತಾರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಡಿಸೆಂಬರ್ 25 ರಂದು ವಾಪಸ್ ಬರಲು ಪೂರಕವಾಗಿ ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡುವುದಾಗಿ ಕೆಎಸ್ಆರ್ಟಿಸಿ ತಿಳಿಸಿದೆ. ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗೀರ್, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ಬಸ್ ವ್ಯವಸ್ಥೆ ಕಲ್ಪಿಸಲಾಗಿತ್ತದೆ
ಮೈಸೂರು ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಬಸ್ ವ್ಯವಸ್ಥೆ ಮಾಡಲಾಗುತ್ತದೆ. ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕೋಯಿಕೋಡ್, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಾಗುತ್ತದೆ.