ಬೆಂಗಳೂರು: ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ನಿರ್ವಹಣೆ ಮತ್ತು ದುರಸ್ತಿ ಕಾರಣದಿಂದಾಗಿ ಇಂದಿನಿಂದ ಜನವರಿ 5 ರವರೆಗೆ ವಿದ್ಯುತ್ ಸೇವೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರಿನ ಹಲವೆಡೆ ಇಂದಿನಿಂದ ಮೂರು ದಿನ ವಿದ್ಯುತ್ ವ್ಯತ್ಯಯ - ಬೆಂಗಳೂರಿನ ಹಲವು ನಗರಗಳಲ್ಲಿ ಇಂದಿನಿಂದ ಮೂರು ದಿನ ವಿದ್ಯುತ್ ವ್ಯತ್ಯಯ
ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ನಿರ್ವಹಣೆ ಮತ್ತು ದುರಸ್ತಿ ಕಾರಣದಿಂದಾಗಿ ಇಂದಿನಿಂದ ವಿದ್ಯುತ್ ಸೇವೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಜನವರಿ 3 ರಿಂದ ನಗರದ ದಕ್ಷಿಣ ವಲಯದ ವಿನಾಯಕ ನಗರ, ಲಕ್ಕಸಂದ್ರ, ಬಿಕಾಸಿಪುರ, ಕಾಶಿನಗರ ಕೆರೆ, ಇಸ್ರೋ ಲೇಔಟ್, ಕುಮಾರಸ್ವಾಮಿ ಲೇಔಟ್, ಜೆಪಿ ನಗರ 1ನೆ ಹಂತ, ಸಾರಕ್ಕಿ ಮಾರುಕಟ್ಟೆ, ಪುಟ್ಟೇನಹಳ್ಳಿ ಮುಖ್ಯರಸ್ತೆ, ಬ್ಯಾಂಕ್ ಆಫ್ ಬರೋಡಾ ಕಾಲೋನಿಯಲ್ಲಿ ವಿದ್ಯುತ್ ಸೇವೆ ಸ್ಥಗಿತವಾಗಲಿದೆ.
ಚ್ರೋಡಾಗ್ ಕಾಲೋನಿ, ಗಣಪತಿ ಪುರ, ಓಲ್ಡ್ ಬ್ಯಾಂಕ್ ಕಾಲೋನಿ, ಟೀಚರ್ಸ್ ಕಾಲೋನಿ, ಬೀರೇಶ್ವರ ನಗರ, ಗಣಪತಿಪುರ, ಕೋಣನಕುಂಟೆ ಕೈಗಾರಿಕಾ ಪ್ರದೇಶ, ಬನಶಂಕರಿ 2ನೇ ಹಂತ, ಜೆ.ಪಿ.ನಗರ 5ನೇ ಹಂತ, ಬ್ಯಾಂಕ್ ಕಾಲೋನಿ, ಶ್ರೀನಿವಾಸ ನಗರ, ವಿವೇಕಾನಂದ ನಗರ, ಈಜಿಪುರ, ಚಲ್ಲಗಟ್ಟಾ, ನಾಗಸಂದ್ರ, ಕೆಂಪಾಪುರದಲ್ಲಿ ಸೇವೆಯಲ್ಲಿ ವ್ಯತ್ಯವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
TAGGED:
load shedding in bangalore