ಬೆಂಗಳೂರು:ಪೇಜಾವರ ಶ್ರೀಗಳ ನಿಧನದ ಹಿನ್ನೆಲೆ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಡಿ.29-31 ವರೆಗೆ ಮೂರು ದಿನ ರಾಜ್ಯಾದ್ಯಂತ ಶೋಕಾಚರಣೆ - banglore state government order mourning
ಪೇಜಾವರ ಶ್ರೀಗಳ ನಿಧನದ ಹಿನ್ನೆಲೆ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ರಾಜ್ಯಾದ್ಯಂತ ಶೋಕಾಚರಣೆ
ಈಗಾಗಲೇ ಸಿಎಂ ಯಡಿಯೂರಪ್ಪ ಉಡುಪಿಯಲ್ಲಿ ಈ ಸಂಬಂಧ ಘೋಷಣೆ ಮಾಡಿದ್ದರು. ಇದೀಗ ರಾಜ್ಯ ಸರ್ಕಾರ ಮೂರು ದಿನಗಳ ಶೋಕಾಚರಣೆ ಘೋಷಿಸಿ ಆದೇಶ ಹೊರಡಿಸಿದೆ. ಡಿ.29 ರಿಂದ ಡಿ.31ರ ವರೆಗೆ ರಾಜ್ಯಾದ್ಯಂತ ಶೋಕಾಚರಣೆ ಘೋಷಿಸಲಾಗಿದೆ. ಈ ವೇಳೆ ಯಾವುದೇ ಅಧಿಕೃತ ಮನರಂಜನಾ ಕಾರ್ಯಕ್ರಮ ಇರುವುದಿಲ್ಲ. ಎಲ್ಲ ಸರ್ಕಾರಿ ಕಟ್ಟಡಗಳ ಮೇಲೆ ರಾಷ್ಟ್ರ ಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲು ನಿರ್ದೇಶನ ನೀಡಲಾಗಿದೆ.
ಜೊತೆಗೆ ಶ್ರೀಗಳ ಅಂತ್ಯ ಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ಆದೇಶ ನೀಡಲಾಗಿದೆ.