ಬೆಂಗಳೂರು: ಪುಲಕೇಶಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸೇಂಟ್ ಜೋಸೆಫ್ ಕಾನ್ವೆಂಟ್ ಹೈ ಪ್ರೈಮರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಮೂವರು ವಿದ್ಯಾರ್ಥಿನಿಯರು ನಾಪತ್ತೆಯಾಗಿದ್ದಾರೆ.
ಸೆಪ್ಟೆಂಬರ್ 6 ರಂದು ಮೂವರು ಬಾಲಕಿಯರು ನಾಪತ್ತೆಯಾಗಿದ್ದು, ಪೋಷಕರು ಪುಲಕೇಶಿನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಶಕ್ತೇಶ್ವರಿ, ವರುಣಿಕಾ, ನಂದಿನಿ ನಾಪತ್ತೆಯಾಗಿರುವ ಬಾಲಕಿಯರು. ಕಾಣೆಯಾಗಿ 9 ದಿನಗಳಾದರೂ ಇನ್ನೂ ಬಾಲಕಿಯರು ಪತ್ತೆಯಾಗಿಲ್ಲ. ಮಕ್ಕಳ ಬಗ್ಗೆ ಕೇಳಿದರೆ ಆಡಳಿತ ಮಂಡಳಿಯವರು ಸಹ ಸರಿಯಾಗಿ ಹೇಳುತ್ತಿಲ್ಲ ಎಂದು ಶಾಲಾ ಆಡಳಿತ ಮಂಡಳಿ ವಿರುದ್ಧ ದೂರು ನೀಡಿದ್ದಾರೆ.