ಬೆಂಗಳೂರು: ಕೊರೊನಾ ಸೋಂಕಿತ ವ್ಯಕ್ತಿಯ ಪ್ರಾಥಮಿಕ ಸಂಪರ್ಕ ಹೊಂದಿರುವ ಸಾಧ್ಯತೆ ಹಿನ್ನೆಲೆ ಡಿಸಿಎಂ ಡಾ. ಅಶ್ವತ್ಥ್ ನಾರಾಯಣ್, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಚಿವ ಸಿ.ಟಿ.ರವಿ ಸ್ವತಃ ಕ್ವಾರಂಟೈನ್ಗೆ ಒಳಗಾಗಿರುವುದಾಗಿ ತಿಳಿಸಿದ್ದಾರೆ.
ಕೊರೊನಾ ಕಂಟಕ: ರಾಜ್ಯದ ಮೂವರು ಸಚಿವರು ಸೆಲ್ಫ್ ಕ್ವಾರಂಟೈನ್! - ಬಸವರಾಜ ಬೊಮ್ಮಾಯಿ
ಕೊರೊನಾ ಸೋಂಕಿತ ವ್ಯಕ್ತಿಯ ಪ್ರಾಥಮಿಕ ಸಂಪರ್ಕ ಹೊಂದಿರುವ ಸಾಧ್ಯತೆ ಹಿನ್ನೆಲೆ ರಾಜ್ಯದ ಮೂವರು ಬಿಜೆಪಿ ನಾಯಕರು ಸೆಲ್ಫ್ ಕ್ವಾರಂಟೈನ್ ಆಗಿದ್ದಾರೆ. ಟ್ವಿಟರ್ನಲ್ಲಿ ಈ ಕುರಿತು ಮಾಹಿತಿ ನೀಡಿರುವ ಅವರು, ಮುನ್ನೆಚ್ಚರಿಕಾ ಕ್ರಮವಾಗಿ ಸ್ವತಃ ತಾವೇ ಕ್ವಾರಂಟೈನ್ ಆಗಿದ್ದೇವೆ ಎಂದಿದ್ದಾರೆ.
ಮಾಧ್ಯಮದ ಕ್ಯಾಮರಾ ಮನ್ವೊಬ್ಬರಿಗೆ ಕೊರೊನಾ ಪಾಸಿಟಿವ್ ವರದಿಯಾದ ಬೆನ್ನಲ್ಲೇ ಅವರೊಂದಿಗೆ ಸುದ್ದಿಗೋಷ್ಠಿ ನಡೆಸಿರುವ ಸಾಧ್ಯತೆ ಇರುವುದರಿಂದ ಮೂವರು ಸಚಿವರು ಮುನ್ನೆಚ್ಚರಿಕೆಯಿಂದ ಕೊರೊನಾ ಟೆಸ್ಟ್ ಸಹ ಮಾಡಿಸಿಕೊಂಡಿದ್ದಾರೆ.
ಈ ಹಿನ್ನೆಲೆ ತಮ್ಮ ಟ್ವಿಟರ್ ಖಾತೆಯಲ್ಲಿ ಸ್ಪಷ್ಟನೆ ನೀಡಿದ್ದು, ಕೋವಿಡ್-19 ಗಂಟಲು ದ್ರವ ಪರೀಕ್ಷೆ ಮಾಡಿಸಿದ್ದು, ಅದು ನೆಗೆಟಿವ್ ಬಂದಿದೆ. ನಾವು ಆರೋಗ್ಯದಿಂದಿದ್ದು, ಸ್ವತಃ ಕ್ವಾರೆಂಟೈನ್ಗೆ ಒಳಗಾಗಿದ್ದೇವೆ. ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದೇವೆ ಎಂದು ಇಬ್ಬರು ಸಚಿವರು ಟ್ವೀಟ್ ಮಾಡಿದ್ದಾರೆ. ಆದರೆ ಮತ್ತೋರ್ವ ಸಚಿವ ಡಾ. ಸುಧಾಕರ್ ಇನ್ನೂ ಯಾವುದೇ ಮಾಹಿತಿ ನೀಡಿಲ್ಲ.