ಬೆಂಗಳೂರು :ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಮೂವರು ಅಧಿಕಾರಿಗಳನ್ನು ಭೂ ಒಡೆಯತನ ಯೋಜನೆಯಲ್ಲಿ ಲಂಚ ಪಡೆದ ಆರೋಪದಡಿ ಎಸಿಬಿ ಬಂಧಿಸಿದ್ದು, ಇವರನ್ನು ಅಮಾನತು ಗೊಳಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ತಿಳಿಸಿದ್ದಾರೆ.
ವಾಲ್ಮೀಕಿ ನಿಗಮದ ಮೂವರು ಅಧಿಕಾರಿಗಳು ಅಮಾನತು : ಡಿಸಿಎಂ ಗೋವಿಂದ ಕಾರಜೋಳ - Three officers of Valmiki corporation suspended
ನಿಗಮದ ಪ್ರಧಾನ ವ್ಯವಸ್ಥಾಪಕ ಎಸ್ ಎಸ್ ನಾಗೇಶ್, ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಮಂಜುಳ ಮತ್ತು ಕಚೇರಿ ಅಧೀಕ್ಷಕ ಪಿ ಡಿ ಸುಬ್ಬಪ್ಪ ಅವರು ಕರ್ನಾಟಕ ನಾಗರಿಕ ಸೇವಾ ನಿಯಮದನ್ವಯ ಕರ್ತವ್ಯ ಲೋಪವೆಸಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ..
Govinda Karjola
ನಿಗಮದ ಪ್ರಧಾನ ವ್ಯವಸ್ಥಾಪಕ ಎಸ್ ಎಸ್ ನಾಗೇಶ್, ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಮಂಜುಳ ಮತ್ತು ಕಚೇರಿ ಅಧೀಕ್ಷಕ ಪಿ ಡಿ ಸುಬ್ಬಪ್ಪ ಅವರು ಕರ್ನಾಟಕ ನಾಗರಿಕ ಸೇವಾ ನಿಯಮದನ್ವಯ ಕರ್ತವ್ಯ ಲೋಪವೆಸಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಇವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ. ಇಲಾಖೆ ವಿಚಾರಣೆಯನ್ನು ಕಾಯ್ದಿರಿಸಿ ಅಮಾನತು ಮಾಡಲಾಗಿದೆ.
ಅಮಾನತಿನ ಅವಧಿಯಲ್ಲಿ ಸಕ್ಷಮ ಪ್ರಾಧಿಕಾರದ ಅನುಮತಿ ಇಲ್ಲದೇ ಕೇಂದ್ರಸ್ಥಾನ ಬಿಡಬಾರದು ಎಂದು ಆದೇಶಿಸಲಾಗಿದೆ ಎಂದು ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.