ಕರ್ನಾಟಕ

karnataka

ETV Bharat / state

ಆಟೋ - ಕಾರು ಅಪಘಾತ: ಮೂವರನ್ನು ಬಲಿ ತೆಗೆದುಕೊಂಡ ಆಟೋ ಚಾಲಕನ ವೇಗ - yelahanka latest crime news

ಪಲ್ಟಿ ಹೊಡೆದು ರಸ್ತೆಯಲ್ಲಿ ಬಿದ್ದಿದ್ದ ಆಟೋಗೆ ಕಾರು ಡಿಕ್ಕಿಯಾಗಿ ಆಟೋ ಚಾಲಕ ಸೇರಿ ಮೂವರು ಸಾವನ್ನಪ್ಪಿದ ಪ್ರಕರಣದ ಯಲಹಂಕ ಬಳಿಯ ಬಾಗಲೂರಿನಲ್ಲಿ ಘಟನೆ ನಡೆದಿದೆ.

accident
ಇಬ್ಬರು ಪ್ರಯಾಣಿಕರು ಸಾವು

By

Published : Aug 7, 2021, 3:13 PM IST

ಯಲಹಂಕ: ಪ್ರಯಾಣಿಕರನ್ನು ಕೂರಿಸಿಕೊಂಡು ಅತೀ ವೇಗದಲ್ಲಿ ಚಾಲನೆ ಮಾಡಿದ ಪರಿಣಾಮ ಆಟೋ ಪಲ್ಟಿ ಹೊಡೆದಿದೆ, ಪಲ್ಟಿ ಹೊಡೆದ ಆಟೋಗೆ ಕಾರು ಡಿಕ್ಕಿ ಹೊಡೆದು ಆಟೋದಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ.

ಈ ಘಟನೆ ಚಿಕ್ಕಜಾಲ ಬಳಿಯ ಬಾಗಲೂರಿನಲ್ಲಿ ನಿನ್ನ ಸಂಜೆ ನಡೆದಿದೆ. ಆಟೋ ಅಡ್ಡಾದಿಡ್ಡಿ ಚಲಾಯಿಸಿ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಪಲ್ಟಿ ಹೊಡೆದಿದೆ, ಕ್ಷಣದಲ್ಲೇ ರಸ್ತೆಯಲ್ಲಿ ಬಿದ್ದ ಆಟೋಗೆ ಕಾರು ಬಂದು ಡಿಕ್ಕಿ ಹೊಡೆದಿದೆ. ಪರಿಣಾಮ ಆಟೋ ಚಾಲಕ ಸೇರಿದಂತೆ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ.

ಇಬ್ಬರು ಪ್ರಯಾಣಿಕರು ಸಾವು

ಆಟೋ ಚಾಲಕ ಕಿರಣ್ (26), ಪ್ರಯಾಣಿಕರಾದ ಅನ್ವರ್ ಹುಸೇನ್(28) ಮತ್ತು ರಾಹುಲ್( 21) ಸಾವನ್ನಪ್ಪಿದ್ದವರು. ಮತ್ತೊಬ್ಬ ಪ್ರಯಾಣಿಕ ವಾಸಪ್ಪ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೂವರು ಪ್ರಯಾಣಿಕರನ್ನ ಕೂರಿಸಿಕೊಂಡು ಬೂದಿಗೆರೆ ಕಡೆಯಿಂದ ಬಾಗಲೂರು ಕಡೆಗೆ ಬರುತ್ತಿದ್ದ ವೇಳೆ ಘಟನೆ ನಡೆದಿದೆ. ಅಪಘಾತ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಕಾರು ಚಾಲಕ ಅಪಘಾತ ಬಳಿಕ ಕಾರನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಇದೀಗ ಕಾರು ಚಾಲಕ ಮತ್ತು ಆಟೋ ಚಾಲಕನ‌ ವಿರುದ್ಧ ಚಿಕ್ಕಜಾಲ ಟ್ರಾಫಿಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ಕಾರು ಚಾಲಕನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ

ABOUT THE AUTHOR

...view details