ಕರ್ನಾಟಕ

karnataka

ETV Bharat / state

ನಾಳೆ ಭಾರತ್ ಬಂದ್: ರಾಜ್ಯಾದ್ಯಂತ ಬಿಗಿ ಪೊಲೀಸ್​ ಬಂದೋಬಸ್ತ್​ - Bharat Bundh from farmers association

ನಾಳೆ ಭಾರತ್​ ಬಂದ್​ ಹಿನ್ನೆಲೆ ರಾಜ್ಯಾದ್ಯಂತ ಬಿಗಿ ಪೊಲೀಸ್​ ಬಂದೋಬಸ್ತ್​ ಕೈಗೊಳ್ಳಲಾಗಿದ್ದು, ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ್​ ಬೊಮ್ಮಾಯಿ ತಿಳಿಸಿದ್ದಾರೆ.

Tight police security across the state
ರಾಜ್ಯಾದ್ಯಂತ ಬಿಗಿ ಪೊಲೀಸ್​ ಬಂದೋ ಬಸ್ತ್​

By

Published : Dec 7, 2020, 7:18 PM IST

ಬೆಂಗಳೂರು : ನಾಳೆ ಭಾರತ್ ಬಂದ್​ಗೆ ಕರೆ ನೀಡಿರುವ ಹಿನ್ನೆಲೆ, ರಾಜ್ಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಬಂದ್ ಸಂದರ್ಭದಲ್ಲಿ ಶಾಂತಿ ಕಾಪಾಡಲು ಜಿಲ್ಲಾ ಎಸ್ಪಿಗಳಿಗೆ ಹೊಣೆ ವಹಿಸಲಾಗಿದೆ. ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲಿ ಹೆಚ್ಚುವರಿಯಾಗಿ 5 ಸಾವಿರ ಹೋಮ್ ಗಾರ್ಡ್ಸ್ ನಿಯೋಜನೆ ಮಾಡಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ : ಭಾರತ್ ಬಂದ್ ಹಿನ್ನೆಲೆ: ನಗರ ಪೊಲೀಸ್ ಆಯುಕ್ತ ಕಮಲ್ ಪಂತ್​ರಿಂದ ತುರ್ತು ಸಭೆ

ಎಲ್ಲಾ ಕಡೆ ಸಿಎಆರ್, ಡಿಎಆರ್ ತಂಡಗಳನ್ನು ನಿಯೋಜನೆ ಮಾಡಲಾಗಿದ್ದು, ಶಾಂತಿಯುತ ಪ್ರತಿಭಟನೆಗೆ ಮನವಿ ಮಾಡುತ್ತೇನೆ. ಕಾನೂನು ಸುವ್ಯವಸ್ಥೆ ಕಾಪಾಡಲು ಎಲ್ಲಾ ಕ್ರಮ ಕೈಗೊಂಡಿದ್ದೇವೆ. ಸಾರ್ವಜನಿಕರಿಗೆ ತೊಂದರೆ ಆಗದಂತೆ ಸಂಘಟಕರು ನಡೆದುಕೊಳ್ಳಬೇಕು. ಸಾರ್ವಜನಿಕರಿಗೆ ತೊಂದರೆಯಾದರೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಎಚ್ಚರಿಕೆ ರವಾನಿಸಿದರು.

ABOUT THE AUTHOR

...view details