ಕರ್ನಾಟಕ

karnataka

ETV Bharat / state

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ - ನೂತನ ಕೃಷಿ ಕಾಯ್ದೆಗಳನ್ನ ವಾಪಸ್ ಪಡೆಯುವಂತೆ ಆಗ್ರಹಿಸಿ ಪ್ರತಿಭಟನೆ

ಭಾರತ್ ಬಂದ್​ಗೆ ಹಿನ್ನೆಲೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕಿಸುವ ಮೂರು ಪ್ರವೇಶ ದ್ವಾರದಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.

tight-security-in-bangalore-airport
tight-security-in-bangalore-airport

By

Published : Dec 8, 2020, 9:22 AM IST

ದೇವನಹಳ್ಳಿ (ಬೆಂಗಳೂರು): ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಕಾಯ್ದೆಗಳನ್ನ ವಾಪಸ್ ಪಡೆಯುವಂತೆ ಆಗ್ರಹಿಸಿ ಇಂದು ರೈತ ಸಂಘಟನೆಗಳು ಭಾರತ್ ಬಂದ್​ಗೆ ಕರೆ ನೀಡಿದ ಹಿನ್ನೆಲೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕಿಸುವ ಮೂರು ಪ್ರವೇಶ ದ್ವಾರದಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದ್ದು, ಮುಂಜಾನೆಯಿಂದ ವಾಹನಗಳ ತಪಾಸಣೆ ಕಾರ್ಯ ಮಾಡಲಾಗುತ್ತಿದೆ. ಬೋರ್ಡಿಂಗ್ ಪಾಸ್ ಇದ್ದ ಪ್ರಯಾಣಿಕರಿಗೆ ಏರ್​ಪೋರ್ಟ್​ಗೆ ಪ್ರವೇಶ ನೀಡಲಾಗುತ್ತಿದ್ದು, ಉಳಿದ ಪ್ರಯಾಣಿಕರನ್ನ ಟೋಲ್​ನಿಂದ ಹೊರಗೆ ಕಳಿಸಲಾಗುತ್ತಿದೆ. ರೈತ ಸಂಘಟನೆಗಳು ಏರ್​ಪೋರ್ಟ್​ಗೆ ಮುತ್ತಿಗೆ ಹಾಕುವ ಸಾಧ್ಯತೆ ಇರುವ ಕಾರಣಕ್ಕೆ ಪೊಲೀಸರು ಮುಂಜಾಗ್ರತೆಯಿಂದ ಕಟ್ಟುನಿಟ್ಟಿನ ತಪಾಸಣೆ ಮಾಡುತ್ತಿದ್ದಾರೆ.

ವಿಮಾನ ನಿಲ್ದಾಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

ಏರ್​ಪೋರ್ಟ್ ಟ್ಯಾಕ್ಸಿ ಚಾಲಕರ ಸಂಘ ಭಾರತ್​ ಬಂದ್​ಗೆ ಬೆಂಬಲ ನೀಡಿದೆ. ಆದರೆ ಟ್ಯಾಕ್ಸಿ ಸೇವೆ ನೀಡುವ ತೀರ್ಮಾನವನ್ನು ಚಾಲಕರಿಗೆ ಬಿಡಲಾಗಿದೆ. ಈಗಾಗಲೇ ಕೊರೊನಾದಿಂದ ಟ್ಯಾಕ್ಸಿ ಚಾಲಕರ ಬದುಕು ಮೂರಾಬಟ್ಟೆಯಾಗಿದ್ದು, ಇಎಂಐ ಕಂತಿನ ಹಣ ಕಟ್ಟಲು ಪರದಾಡುವ ಸ್ಥಿತಿ ಇದೆ. ಹಾಗಾಗಿ ಟ್ಯಾಕ್ಸಿ ಸೇವೆ ನಿಲ್ಲಿಸುವ ಅಥವಾ ಸಂಚರಿಸುವ ನಿರ್ಧಾರವನ್ನು ಚಾಲಕರಿಗೇ ಬಿಡಲಾಗಿದೆ.

ವಿಮಾನ ನಿಲ್ದಾಣದಿಂದ ನಗರದ ವಿವಿಧ ಭಾಗಗಳಿಗೆ ಮತ್ತು ಜಿಲ್ಲೆಗಳಿಗೆ ಸಂಚಾರಿವ ಕೆಎಸ್​ಆರ್​ಟಿಸಿ ಬಸ್ ಮತ್ತು ಬಿಎಂಟಿಸಿ ಬಸ್​ಗಳು ಎಂದಿನಂತೆ ಸಹಜವಾಗಿ ಸಂಚರಿಸುತ್ತಿವೆ. ಬಂದ್ ತೀವ್ರತೆ ನೋಡಿಕೊಂಡು ಬಸ್​ಗಳ ಸಂಚಾರದ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದೆಂದು ಸಾರಿಗೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ವಿಮಾನ ನಿಲ್ದಾಣದಿಂದ ನಗರದ ವಿವಿಧ ಭಾಗಗಳಿಗೆ ಸಂಚರಿಸುವ ಮತ್ತು ಜಿಲ್ಲೆಗಳಿಗೆ ಸಂಚಾರಿವ ಕೆಎಸ್​ಆರ್​ಟಿಸಿ ಬಸ್ ಮತ್ತು ಬಿಎಂಟಿಸಿ ಬಸ್​ಗಳು ಎಂದಿನಂತೆ ಸಹಜವಾಗಿ ಸಂಚರಿಸುತ್ತಿವೆ. ಬಂದ್ ತೀವ್ರತೆ ನೋಡಿಕೊಂಡು ಬಸ್​ಗಳ ಸಂಚಾರದ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದೆಂದು ಅಧಿಕಾರಿಗಳು ಹೇಳಿದ್ದಾರೆ.

ABOUT THE AUTHOR

...view details