ಕರ್ನಾಟಕ

karnataka

ETV Bharat / state

4 ವರ್ಷಗಳ ಜೈಲು ಶಿಕ್ಷೆ ಬಳಿಕ ಶಶಿಕಲಾ ಬಿಡುಗಡೆ.. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಕೆ - Tight security near victoria hospital

ಜೈಲಿನ ಅಧಿಕಾರಿಗಳು ವಿಕ್ಟೋರಿಯಾ ಆಸ್ಪತ್ರೆಗೆ ಬಂದು ಬಿಡುಗಡೆ ಪ್ರಕ್ರಿಯೆ ಪೂರ್ಣಗೊಳಿಸಿದ್ದಾರೆ. ಚಿಕಿತ್ಸೆ ಪಡೆದು ಗುಣಮುಖರಾಗಿರುವ ಶಶಿಕಲಾಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಮುಂದುವರೆಯಲಿದೆ.

ಶಶಿಕಲಾ ಬಿಡುಗಡೆ ಹಿನ್ನೆಲೆ ಆಸ್ಪತ್ರೆ ಬಳಿ ಬಿಗಿ ಪೊಲೀಸ್ ಬಂದೋಬಸ್ತ್
ಶಶಿಕಲಾ ಬಿಡುಗಡೆ ಹಿನ್ನೆಲೆ ಆಸ್ಪತ್ರೆ ಬಳಿ ಬಿಗಿ ಪೊಲೀಸ್ ಬಂದೋಬಸ್ತ್

By

Published : Jan 27, 2021, 10:58 AM IST

Updated : Jan 27, 2021, 12:39 PM IST

ಬೆಂಗಳೂರು:ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ನಾಲ್ಕು ವರ್ಷಗಳ ಕಾಲ ಜೈಲು ಸೇರಿದ್ದ ಶಶಿಕಲಾ ನಟರಾಜನ್ ಇಂದು ಬಿಡುಗಡೆಯಾಗಿದ್ದಾರೆ. ಜೈಲಿನ ಅಧಿಕಾರಿಗಳು ವಿಕ್ಟೋರಿಯಾ ಆಸ್ಪತ್ರೆಗೆ ಬಂದು ಬಿಡುಗಡೆ ಪ್ರಕ್ರಿಯೆ ಪೂರ್ಣಗೊಳಿಸಿದ್ದಾರೆ.

ಜೈಲು ಅಧಿಕಾರಿಗಳು ಬಿಡುಗಡೆ ಪತ್ರದೊಂದಿಗೆ ವಿಕ್ಟೋರಿಯಾ ಆಸ್ಪತ್ರೆ ಗೆ ಬಂದು, ಶಶಿಕಲಾರ ಬಿಡುಗಡೆಯ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದಾರೆ. ಕೆಲವೊಂದು ದಾಖಲಾತಿ ಪತ್ರಗಳಿಗೆ ಸಹಿ ಹಾಕಿದ ಬಳಿಕ ಅಧಿಕೃತವಾಗಿ ಶಶಿಕಲಾ ಬಿಡುಗಡೆಯಾಗಿದ್ದಾರೆ.

ಸದ್ಯ ಕೋವಿಡ್ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಶಶಿಕಲಾ. ಇನ್ನು ಕೆಲವು ದಿನ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯಲಿದ್ದಾರೆ.

ಜೈಲಿನಲ್ಲಿರುವ ಶಶಿಕಲಾ ಬಟ್ಟೆ ಹಾಗೂ ಇತರ ವಸ್ತುಗಳನ್ನು ಬೇರೆ ವಾಹನದಲ್ಲಿ ಕಳುಹಿಸಿಕೊಡಲು ವ್ಯವಸ್ಥೆ ಮಾಡಲಾಗಿದೆ‌‌. ನ್ಯಾಯಾಲಯದ ಆದೇಶದಂತೆ ಇಂದು ಶಶಿಕಲಾ ಬಿಡುಗಡೆಯಾಗಿದ್ದಾರೆ.

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಕೆ

ಇದನ್ನೂ ಓದಿ:ಚಿನ್ನಮ್ಮನ ಬಿಡುಗಡೆಗೆ ಪರಪ್ಪನ ಅಗ್ರಹಾರದಲ್ಲಿ ಸಕಲ ಸಿದ್ಧತೆ: ಆಸ್ಪತ್ರೆಯತ್ತ ಅಭಿಮಾನಿಗಳ ದಾಂಗುಡಿ

ಮತ್ತೊಂದೆಡೆ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಶಶಿಕಲಾ ಜೊತೆ ಅಪರಾಧಿಯಾಗಿ ಜೈಲು ಶಿಕ್ಷೆ ಅನುಭವಿಸಿರುವ ಇಳವರಸಿ ಹಾಗೂ ಸಹೋದರ ಸಂಬಂಧಿ ಸುಧಾಕರ್ ಪರಪ್ಪನ ಅಗ್ರಹಾರ ಜೈಲಿನಿಂದಲೇ ಫೆಬ್ರವರಿ 7 ರಂದು ಬಿಡುಗಡೆಯಾಗಲಿದ್ದಾರೆ.

ಶಶಿಕಲಾ ಬಿಡುಗಡೆ ಹಿನ್ನೆಲೆಯಲ್ಲಿ ಆಸ್ಪತ್ರೆಯತ್ತ ಶಶಿಕಲಾ ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿ ಬರುವ ಸಾಧ್ಯತೆ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ‌‌.

Last Updated : Jan 27, 2021, 12:39 PM IST

ABOUT THE AUTHOR

...view details