ಬೆಂಗಳೂರು:ಮಧ್ಯಪ್ರದೇಶದ ಕಾಂಗ್ರೆಸ್ ಬಂಡಾಯ ಶಾಸಕರಿಗೆ ಹೆಚ್ಚಿನ ಭದ್ರತೆ ನೀಡುವ ಹಿನ್ನೆಲೆ, ಶಾಸಕರು ವಾಸ್ತವ್ಯ ಹೂಡಿರುವ ರಮಡಾ ರೆಸಾರ್ಟ್ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಬೆಳ್ಳಂ ಬೆಳಗ್ಗೆ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ , ಶಾಸಕ ಆರೀಫ್ ಮಸೂದ್ ಸೇರಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಶಾಸಕರಾದ ಕೃಷ್ಣಭೈರೇಗೌಡ, ಹ್ಯಾರೀಸ್,ರಿಜ್ವಾನ್ ಅರ್ಷದ್ ಸೇರಿದಂತೆ ಇನ್ನಿತರ ಮುಖಂಡರು ಬಂಡಾಯ ಶಾಸಕರನ್ನು ಭೇಟಿ ಮಾಡಲು ಮುಂದಾಗಿದ್ದರು. ಈ ವೇಳೆ ನಾಗೇನಹಳ್ಳಿ ಗೇಟ್ ಬಳಿ ಪೊಲೀಸರು ತಡೆದಿದ್ದರಿಂದ ಸ್ಥಳದಲ್ಲಿ ಹೈಡ್ರಾಮ ನಡೆದಿತ್ತು.