ಬೆಂಗಳೂರು:ಹೈಕೋರ್ಟ್ ಕಾನೂನು ಸೇವಾ ಸಮಿತಿ ಹಾಗೂ ತುಮಕೂರು ಜಿಲ್ಲೆಯ ಚೇಳೂರು ಗ್ರಾಮದ ಎ.ಮಲ್ಲಿಕಾರ್ಜುನ ಸಲ್ಲಿಸಿದ್ದ ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿಗಳಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.
ಬರಪೀಡಿತ ತಾಲೂಕಿನಲ್ಲಿ ಜಾನುವಾರು ಶಿಬಿರ ಸ್ಥಾಪನೆಗೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ - undefined
ರಾಜ್ಯದ 65 ತಾಲೂಕುಗಳನ್ನ ಬರಪೀಡಿತ ತಾಲೂಕುಗಳೆಂದು ಪರಿಗಣಿಸಿ ಆ ಪ್ರದೇಶಗಳಲ್ಲಿ ಒಂದೊಂದು ಕಡೆ ಜಾನುವಾರು ಶಿಬಿರ ಸ್ಥಾಪಿಸಬೇಕೆಂದು ರಾಜ್ಯ ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಸರ್ಕಾರ ಪರ ವಾದ ಮಂಡನೆ ಮಾಡಿ ರಾಜ್ಯದಲ್ಲಿರುವ ಪ್ರತಿ ಜಾನುವಾರು ಶಿಬಿರದಲ್ಲಿ ಒದೊಂದು ಜಾನುವಾರುಗಳಿಗೆ 5 ಕೆಜಿ ಮೇವನ್ನು ಒದಗಿಸಲಾಗುತ್ತಿದೆ. ಹಾಗೆ ಇಲ್ಲಿಯವರೆಗೆ 27 ಜಾನುವಾರು ಶಿಬಿರಗಳನ್ನು ಸ್ಥಾಪಿಸಲಾಗಿದೆ ಎಂದರು.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠವು ರಾಜ್ಯ ಸರಕಾರವು ಕೇವಲ 27 ಜಾನುವಾರು ಶಿಬಿರಗಳನ್ನು ಸ್ಥಾಪಿಸಿದೆ, ಆದರೆ 2018ರ ಡಿಸೆಂಬರ್‌ನಲ್ಲಿ ರಾಜ್ಯ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ 165 ಬರಪೀಡಿತ ತಾಲೂಕುಗಳಲ್ಲಿ 153 ಜಾನುವಾರು ಶಿಬಿರಗಳನ್ನು ಸ್ಥಾಪಿಸಬೇಕೆಂದು ತೀರ್ಮಾನ ಕೈಗೊಂಡಿತ್ತು. ಆದರೆ ಇದನ್ನ ಸರಿಯಾಗಿ ಪಾಲಿಸಿಲ್ಲ. ರಾಜ್ಯದ 65 ಬರಪೀಡಿತ ತಾಲೂಕಿನಲ್ಲಿ ಒಂದೊಂದು ಜಾನುವಾರು ಶಿಬಿರಗಳನ್ನು ಸ್ಥಾಪಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಸೂಚಿಸಿ ವಿಚಾರಣೆಯನ್ನ ಮುಂದೂಡಿಕೆ ಮಾಡಿದೆ.