ಬೆಂಗಳೂರು: ನಗರದಲ್ಲಿ ಬಿಹಾರಿ ವಲಸೆ ಕಾರ್ಮಿಕರಿಂದ ಹಾಟ್ಸ್ಪಾಟ್ ಆಗಿದ್ದ ಬೊಮ್ಮನಹಳ್ಳಿ ವಲಯದಲ್ಲಿ ನಾಲ್ಕು ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.
P-2834 ಸಂಪರ್ಕದಿಂದ 30 ವರ್ಷದ ಮಹಿಳೆ, 55 ವರ್ಷದ ಮಹಿಳೆ ಹಾಗೂ 28 ವರ್ಷದ ವ್ಯಕ್ತಿಗೆ ಕೊರೊನಾ ಪಾಸಿಟಿವ್ ದೃಢವಾಗಿದೆ. ರೋಗಿಗಳ ವಿವರಗಳನ್ನು ಅಧಿಕಾರಿಗಳು ಸಂಗ್ರಹಿಸುತ್ತಿದ್ದಾರೆ. ಇನ್ನೊಂದೆಡೆ P-2894 ಸಂಪರ್ಕದಿಂದ 31 ವರ್ಷದ ವ್ಯಕ್ತಿಗೆ ಕೊರೊನಾ ಸೋಂಕು ಹರಡಿದೆ.