ಬೆಂಗಳೂರು: ರಾಜ್ಯದಲ್ಲಿ ಇಂದು 25,743 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಈ ಪೈಕಿ 1,231 ಮಂದಿಗೆ ಸೋಂಕು ದೃಢಪಟ್ಟಿದೆ. ಇಂದು 1047 ಮಂದಿ ಡಿಸ್ಚಾರ್ಜ್ ಆಗಿದ್ದು, ಒಟ್ಟು 39,35,088 ಮಂದಿ ಗುಣಮುಖರಾಗಿದ್ದಾರೆ. ಕೋವಿಡ್ ಸಾವಿನ ಸಂಖ್ಯೆ ಶೂನ್ಯ.
ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ 6,603ಕ್ಕೆ ಏರಿಕೆಯಾಗಿದೆ. ಈ ಮೂಲಕ ಸೋಂಕಿತರ ಪ್ರಮಾಣ ಶೇ. 4.78 ರಷ್ಟಿದ್ದರೆ, ವಾರದ ಸೋಂಕಿತರ ಪ್ರಮಾಣ ಶೇ. 4.31 ರಷ್ಟಿದೆ. ಇಲ್ಲಿಯವರೆಗೂ ಪರೀಕ್ಷಿಸಲಾದ ಒಟ್ಟು ಸಂಖ್ಯೆ 67,2,94,795. ವಾರದ ಸಾವಿನ ಪ್ರಮಾಣ ಶೇ. 0.04 ರಷ್ಟಿದೆ. ವಿಮಾನ ನಿಲ್ದಾಣದಿಂದ ಇಂದು ತಪಾಸಣೆಗೆ 4,769 ಮಂದಿ ಒಳಗಾಗಿದ್ದು, ಇದುವರೆಗೂ 12,08,156 ಪ್ರಯಾಣಿಕರು ಕೋವಿಡ್ ತಪಾಸಣೆಗೆ ಒಳಪಟ್ಟಿದ್ದಾರೆ.