ಬೆಂಗಳೂರು: ರಾಜ್ಯದಲ್ಲಿಂದು ಒಂದೇ ದಿನ 2,298 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 9,75,955ಕ್ಕೆ ಏರಿಕೆ ಆಗಿದೆ. 12 ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆಯು 12,461ಕ್ಕೆ ಏರಿದೆ. 995 ಮಂದಿ ಗುಣಮುಖರಾಗಿದ್ದು, ಇದುವರೆಗೂ 9,46,589 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಇತ್ತ ಮತ್ತೆ ಸಕ್ರಿಯ ಪ್ರಕರಣಗಳು 16,886 ಇದ್ದು, 143 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಂಕಿತರ ಪ್ರಕರಣಗಳ ಶೇಕಡಾವಾರು 2.12ರಷ್ಟು ಇದ್ದರೆ, ಮೃತಪಟ್ಟವರ ಪ್ರಮಾಣ ಶೇ. 0.52ರಷ್ಟು ಇದೆ. ವಿಮಾನ ನಿಲ್ದಾಣದಿಂದ ಇಂದು 140 ಪ್ರಯಾಣಿಕರು ಆಗಮಿಸಿದ್ದು, ಕೋವಿಡ್ ತಪಾಸಣೆಗೆ ಒಳಪಟ್ಟಿದ್ದಾರೆ.