ಕರ್ನಾಟಕ

karnataka

ETV Bharat / state

ನಾಳೆ ರಾಜ್ಯದ ಕರಾವಳಿಯಲ್ಲಿ ನೆರೆ ಹಾವಳಿ ಪ್ರದೇಶ ವೀಕ್ಷಿಸಲಿರುವ ಸಿಎಂ ಬಿಎಸ್​​ವೈ - ವೈಮಾನಿಕ ಸಮೀಕ್ಷೆ

ನಾಳೆ ಕರಾವಳಿ ಕರ್ನಾಟಕದ ಪ್ರವಾಹ ಸಮೀಕ್ಷೆಯನ್ನು ಸಿಎಂ ಯಡಿಯೂರಪ್ಪ ಕೈಗೊಳ್ಳಲಿದ್ದಾರೆ. ಭಾನುವಾರ ಕೇಂದ್ರ ಗೃಹ ಸಚಿವ ಅಮಿತ್​ ಶಾ ಜತೆಗೂಡಿ ವೈಮಾನಿಕ ಸಮೀಕ್ಷೆ ನಡೆಸಿದ್ದು, ಅನೇಕ ಪರಿಹಾರ ಕಾರ್ಯಕ್ಕೆ ಕೇಂದ್ರ ಸರ್ಕಾರವೂ ಕೈಜೋಡಿಸಲಿದೆ.

ಸಿಎಂ ಯಡಿಯೂರಪ್ಪ

By

Published : Aug 11, 2019, 10:04 PM IST

ಬೆಂಗಳೂರು:ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಪ್ರವಾಹ ಹಾನಿ ಪ್ರದೇಶಗಳಿಗೆ ಸಿಎಂ ಯಡಿಯೂರಪ್ಪ ನಾಳೆ (ಆ.12) ಭೇಟಿ ನೀಡಲಿದ್ದಾರೆ.

ಸಿಎಂ ಯಡಿಯೂರಪ್ಪ

ಕೇಂದ್ರ ಗೃಹ ಸಚಿವ ಅಮಿತ್ ಶಾ ವೈಮಾನಿಕ ಸಮೀಕ್ಷೆಗೆ ರಾಜ್ಯಕ್ಕೆ ಬಂದ ಹಿನ್ನೆಲೆಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಭೇಟಿಯನ್ನು ರದ್ದುಗೊಳಿಸಲಾಗಿತ್ತು.

ಮೊದಲಿಗೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿಗೆ ಭೇಟಿ ನೀಡಲಿದ್ದು, ಬಳಿಕ ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ತೆರಳಲಿದ್ದಾರೆ. ಕಾರವಾರದಲ್ಲಿಯೇ ತಂಗಲಿದ್ದು, ಅಧಿಕಾರಿಗಳು ಮತ್ತು ಸ್ಥಳೀಯ ಜನಪ್ರತಿನಿಧಿಗಳ ಜೊತೆ ಪರಿಹಾರ ಕಾರ್ಯಗಳ ಪರಿಶೀಲನೆ ನಡೆಸಲಿದ್ದಾರೆ.

ಮಂಗಳವಾರ ಕಾರವಾರದಿಂದ ಹಾವೇರಿ ಮತ್ತು ಶಿವಮೊಗ್ಗ ಜಿಲ್ಲೆಗಳ ಮಳೆ ಹಾನಿ ಕುರಿತು ಪರಿಶೀಲನೆ ನಡೆಸಿ, ಬೆಂಗಳೂರಿಗೆ ವಾಪಸಾಗಲಿದ್ದಾರೆ ಎಂದು ತಿಳಿದು ಬಂದಿದೆ.

ABOUT THE AUTHOR

...view details